ಬೆಂಗಳೂರು:ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ. ಆ ಪ್ರಯುಕ್ತ ರಾಜ್ಯ ಸರ್ಕಾರವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ವೈದ್ಯರ ದಿನಾಚರಣೆಯನ್ನು ಹಮ್ಮಿಕೊಂಡಿತ್ತು. ಆದರೆ ಇದರಲ್ಲಿ ಭಾಗಿಯಾಗಲು ಬಂದಿದ್ದ ವೈದ್ಯರು ಮುಖ್ಯಮಂತ್ರಿ-ಉಪ ಮುಖ್ಯಮಂತ್ರಿ ಅವರಿಗಾಗಿ ಕಾದು ಕಾದು ಸುಸ್ತಾಗುವಂತಾಗಿತ್ತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ಹಮ್ಮಿಕೊಂಡಿದ್ದು, ಅದಕ್ಕೆ ಹಲವಾರು ವೈದ್ಯರನ್ನು ಆಹ್ವಾನಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇದರಲ್ಲಿ ಭಾಗಿಯಾಗಿದ್ದಾರೆ.
ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಕುರಿತ ಸಿದ್ಧತಾ ಸಭೆಯಲ್ಲಿ ತೊಡಗಿಕೊಂಡಿದ್ದರಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂದುಕೊಂಡ ಸಮಯಕ್ಕೆ ಸರಿಯಾಗಿ ಆರಂಭವಾಗಿಲ್ಲ. ಐದು ಗಂಟೆಗೆ ಎಂದು ನಿಗದಿಯಾಗಿದ್ದ ಕಾರ್ಯಕ್ರಮ ಏಳು ಗಂಟೆಗೆ ಆರಂಭವಾಯಿತು. ಹೀಗಾಗಿ ಕಾರ್ಯಕ್ರಮಕ್ಕೆ ಬಂದಿದ್ದ ವೈದ್ಯರು ಕಾದು ಬಳಲುವಂತಾಯಿತು.
ತಮ್ಮನನ್ನು ಉಳಿಸಲು ಹೋದ ಅಕ್ಕ, ಅವರಿಬ್ಬರನ್ನು ರಕ್ಷಿಸಲು ಹೋದ ಅಮ್ಮ: ಕೊನೆಗೆ ಮೂವರೂ ಬದುಕಲಿಲ್ಲ!; ಆಗಿದ್ದೇನು?

ಪಿಕ್​ನಿಕ್​ಗೆ ತೆರಳಿದ್ದ 27 ವರ್ಷದ ಯುವಕ ಹೃದಯಾಘಾತದಿಂದ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
