ಮಂಡ್ಯ:ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕನ್ನಡ ಸೇನೆ ಕರ್ನಾಟಕ ಸಂಘಟನೆ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಮಹಾವೀರ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕನ್ನಡಿಗರಿಗೆ ಪ್ರಾಶಸ್ತ್ಯ ನೀಡುವ ನಿಟ್ಟಿನಲ್ಲಿ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು.ಬಳಿಕ ನಗರಸಭೆ ಕಚೇರಿ ಆವರಣಕ್ಕೆ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಮಂಡ್ಯ ನಗರದ ಸಾರ್ವಜನಿಕ ಸ್ಥಳ, ಅಂಗಡಿ ಮುಂಗಟ್ಟುಗಳ ನಾಮಲಕವನ್ನು ಕಡ್ಡಾಯವಾಗಿ ಕನ್ನಡದಲ್ಲೇ ಅಳವಡಿಸುವಂತೆ ಸೂಚಿಸಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಅತ್ಯಂತ ಸಮೃದ್ಧ, ಶ್ರೀಮಂತವೂ ಆಗಿದೆ. ಹಲ್ಮಿಡಿ ಶಾಸನದಿಂದ ಪ್ರಾರಂಭಗೊಂಡು ಆಧುನಿಕತೆಯವರೆಗೆ ಕನ್ನಡ ಭಾಷೆ ಬೆಳೆದಿದೆ. ಭಾರತೀಯ ಭಾಷೆಗಳಲ್ಲಿ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಕರ್ನಾಟಕದ ಆಡಳಿತ ಭಾಷೆಯಾಗಿರುವ ಕನ್ನಡದ ಅನನ್ಯತೆ ಹಾಗೂ ಅಸ್ಮಿತೆಗೆ ಧಕ್ಕೆಯೊದಗದ ಹಾಗೆ ಕಾಪಾಡಿಕೊಳ್ಳುವ ಹೊಣೆಗಾರಿಕೆ ಕನ್ನಡಿಗರಾದ ನಮ್ಮೆಲ್ಲರದ್ದಾಗಿದೆ. ನೂರಕ್ಕ ನೂರಕಷ್ಟು ಕನ್ನಡ ಮಾತನಾಡುವ ಗಂಡುಮೆಟ್ಟಿನ ಜಿಲ್ಲೆ ಮಂಡ್ಯದಲ್ಲಿ ಇತ್ತೀಚಿನ ದಿನಮಾನಗಳಲ್ಲಿ ಅನ್ಯ ಭಾಷೆಗಳು ಇಣುಕಿ ನೋಡುತ್ತಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.ನಗರ ವ್ಯಾಪ್ತಿಯ ಅಂಗಡಿ ಮಂಗಟ್ಟುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬರೆಯಲಾಗಿರುವ ನಾಮಲಕಗಳಲ್ಲಿ ಇಂಗ್ಲೀಷ್, ಹಿಂದಿ ಸೇರಿದಂತೆ ಅನ್ಯಭಾಷೆಗಳು ರಾರಾಜಿಸುತ್ತಿವೆ. ಆಡಳಿತ ಭಾಷೆಯಾದ ಕನ್ನಡವನ್ನೇ ಅತ್ಯಂತ ಸಣ್ಣ ಅಕ್ಷರಗಳಲ್ಲಿ ಹಾಗೂ ದ್ವಿತೀಯವಾಗಿ ಬರೆದಿರುವ ನಿದರ್ಶನಗಳು ಎಲ್ಲೆಡ ಕಾಣಸಿಗುತ್ತವೆ. ಇಂತಹ ಕನ್ನಡ ವಿರೋಧಿ ಬೆಳವಣಿಗೆಗಳು ಜಿಲ್ಲಾದ್ಯಂತ ಹೆಚ್ಚುತ್ತಿವೆ. ಇದನ್ನು ನಮ್ಮ ಸ್ಥಳೀಯ ಸಂಸ್ಥೆಗಳು, ತಾಲೂಕು ಆಡಳಿತಗಳು, ಜಿಲ್ಲಾಡಳಿತ ಕಂಡು ಕಾಣದಂತೆ ಕಣ್ಮುಚ್ಚಿ ಕುಳಿತಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್, ಮುಖಂಡರಾದ ಶಿವಮಾದು, ಸುನೀತಾ, ರೇವಣ್ಣ, ಬಸವರಾಜು, ವೈ.ಈ. ರಮೇಶ್, ಜಯಮ್ಮ, ಮಧುಕುಮಾರ್, ಜೆ.ಕೆಂಪರಾಜು, ನವೀನ್ ಇತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
