ಬೆಂಗಳೂರು:ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆದರೂ ತನ್ನ ತೀರ್ಮಾನದಿಂದ ಹಿಂದೆ ಸರಿಯದ ಸರ್ಕಾರ, ಅಧಿಕೃತ ಆದೇಶವನ್ನೂ ಹೊರಡಿಸಿದೆ.
ಮರಾಠ ಸಮುದಾಯದ ಅಭಿವೃದ್ಧಿಗೆ ನಿಗಮ ರಚಿಸಲು ಹೊರಟಿದ್ದ ಸರ್ಕಾರ ಆರಂಭದಲ್ಲಿ ತೀವ್ರ ಆಕ್ರೋಶ ಎದುರಿಸಿತ್ತು. ಬಳಿಕ ಜನರ ಗೊಂದಲ ನಿವಾರಿಸಲು ಮರಾಠ ಸಮುದಾಯ ನಿಗಮದ ರಚಿಸುವುದಾಗಿ ಹೇಳಿತ್ತಲ್ಲದೇ ಸಂಪುಟದಲ್ಲೂ ನಿರ್ಧಾರ ಕೈಗೊಂಡಿತ್ತು. ಇದೀಗ ಮರಾಠ ಅಭಿವೃದ್ಧಿ ನಿಗಮ ಎಂದು ಹೆಸರನ್ನು ಪರಿಷ್ಕರಿಸಿದ್ದು, ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ.
ರಾಜ್ಯದಲ್ಲಿ ಮರಾಠ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಈ ಸಮಾಜದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಅಭಿವೃದ್ಧಿ ಇತ್ಯಾದಿಗಾಗಿ ಈ ನಿಗಮ ಸ್ಥಾಪಿಸುತ್ತಿರುವುದಾಗಿ ಸರ್ಕಾರ ಹೇಳಿಕೊಂಡಿದೆ.
ಈ ಹಿಂದೆ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸುವುದಾಗಿ ಪ್ರಸ್ತಾವನೆ ಸಿದ್ಧ ಮಾಡಿಕೊಂಡಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆರ್ಥಿಕ ಇಲಾಖೆಯ ಸಹಮತಿಯೊಂದಿಗೆ 50 ಕೋಟಿ ರೂ. ಮೀಸಲಿಡುವ ಪ್ರಸ್ತಾಪ ಮಾಡಿತ್ತು. ಇದೀಗ ನಿಗಮ ರಚನೆಗೆ ಅಧಿಕೃತ ಆದೇಶ ಹೊರಬಿದ್ದಿದೆ.
ಜನಮತ | ಕನ್ನಡಕ್ಕೆ ಖಾಲಿ ತಟ್ಟೆ ಮರಾಠಕ್ಕೆ ಮೃಷ್ಟಾನ್ನ

ನಿಖಿಲ್​-ಪ್ರಜ್ವಲ್ ಒಟ್ಟಾಗಿ ಯುದ್ಧಕ್ಕೆ ಹೋಗಲಿ..! ಚಿಕ್ಕಪ್ಪ-ದೊಡ್ಡಪ್ಪನ ಎದುರಲ್ಲೇ ಸವಾಲು

ಯಾರೂ ಇಲ್ಲದ ವೇಳೆ ಮನೆಗೆ ಎಂಟ್ರಿ ಕೊಡುತ್ತಿದ್ದಳು, ಈಕೆಯ ಕೃತ್ಯಕ್ಕೆ ಸ್ಥಳೀಯರೇ ಬೆಚ್ಚಿಬಿದ್ದಿದ್ದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
