ಬೆಂಗಳೂರು:ಜಗದ್ಗುರು ಶ್ರೀರೇಣುಕಾಚಾರ್ಯ ಜಯಂತಿಯನ್ನು ಇನ್ನು ಮುಂದೆ ಪ್ರತಿ ವರ್ಷ ಮಾರ್ಚ್ 16ರಂದು ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಆಚರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಸಂಬಂಧ ಇಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ.
ಜಗದ್ಗುರು ಶ್ರೀರೇಣುಕಾಚಾರ್ಯ ಅವರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹಾರ್ದ ಬದುಕನ್ನು ಅವರು ಬೋಧಿಸಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಇವರು ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿದ್ದಾರೆ.
ಸೌಹಾರ್ದ, ಸಹಬಾಳ್ವೆಯ ಮಹತ್ವವನ್ನು ನಾಡಿನ ಜನತೆಗೆ ಸಾರಿದವರು ಜಗದ್ಗುರು ರೇಣುಕಾಚಾರ್ಯರು. ಈ ಹಿನ್ನೆಲೆಯಲ್ಲಿ ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.
ಅದರ ಆಧಾರದ ಮೇಲೆ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಮಾರ್ಚ್ 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ಯೋಗಿ ಆದಿತ್ಯನಾಥ್​ ಪ್ರಮಾಣವಚನ: ದೇಶದಲ್ಲೀಗ ಐವರು ‘ಅಂಡರ್​ 50 ಸಿಎಂ’!

ರಾಮ್​ಗೋಪಾಲ್ ವರ್ಮಾ ಜತೆ ಅಂಡರ್​ವರ್ಲ್ಡ್​​ನಲ್ಲಿ ಉಪೇಂದ್ರ; ಯಾರದು ‘R’?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × four =
Remember me
