​ಶಿವಮೊಗ್ಗ:ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಮಾಡಿರುವ ಘಟನೆ ಆಯನೂರು ಸಮೀಪದ ಮಂಡಗಟ್ಟ ನಗರ ರಸ್ತೆಯಲ್ಲಿ ಬುಧವಾರ ನಡೆದಿದೆ.
ಕುಂಸಿ ಠಾಣೆ ಪಿಎಸ್​ಐ ನವೀನ್ ಮಠಪತಿ ಹಾಗೂ ಪೊಲೀಸ್​ ಕಾನ್ಸ್​ಟೇಬಲ್​ ಬಸವಂತಪ್ಪ‌ ಮೇಲೆ‌ ಹಲ್ಲೆ ನಡೆದಿದ್ದು, ಪಿಎಸ್​ಐಗೆ ಗಂಭೀರ ಗಾಯವಾಗಿದ್ದು, ಪಿಸಿಗೆ ಕೈ ಮುರಿತವಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಮಂಡಘಟ್ಟದ ಮಧು ಹಾಗೂ ಮನು ಎಂಬುವರನ್ನು ಬಂಧಿಸಲು ಹೋದಾಗ ಘಟನೆ ನಡೆದಿದೆ.
ಆರೋಪಿಗಳ ಮನೆಗೆ ಪೊಲೀಸರು ದಾಳಿ ಮಾಡುತ್ತಿದ್ದಂತೆ ಪಿಎಸ್​ಐ ತಲೆಗೆ ಆರೋಪಿಗಳು ಮಾರಕಾಸ್ತ್ರದಿಂದ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡ ಪಿಎಸ್​ಐ ಸ್ಥಳದಲ್ಲೇ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಅವರನ್ನು ರಕ್ಷಿಸಲು ಮುಂದಾದ ಪಿಸಿ ಬಸವಂತಪ್ಪ ಮೇಲೆಯೂ ಹಲ್ಲೆ ಮಾಡಿದ್ದಾರೆ.
ಕೂಡಲೇ ಇಬ್ಬರನ್ನು ಸ್ಥಳೀಯರು ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಿಎಸ್​ಐ ನವೀನ್ ಮಠಪತಿ ಇದೀಗ ಚೇತರಿಸಿಕೊಂಡಿದ್ದಾರೆ. ಕುಂಸಿ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಎಗ್ಗಿಲ್ಲದೆ ಸಾಗಿದ್ದು, ಈ ಹಿನ್ನೆಲೆಯಲ್ಲಿ ಪಿಎಸ್​ಐ ನಿರಂತರ ಕಾರ್ಯಾಚರಣೆಗಿಳಿದಿದ್ದರು.
ಮಂಡಘಟ್ಟ ಗ್ರಾಮದಲ್ಲಿಯೂ ದಾಳಿ ನಡೆಸಿ ನೂರಾರು ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದರು. ಪಿಎಸ್​ಐ ಮೇಲೆ ದಾಳಿ‌ ನಡೆಸಿದ ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + eighteen =
Remember me
