ಮಂಡ್ಯ:ವರಿಷ್ಠರ ನಡೆಯಿಂದ ಅಸಮಾಧಾನಗೊಂಡು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವಧಿಗೆ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ.ಹಲವು ತಿಂಗಳಿಂದ ಜೆಡಿಎಸ್ ಪಕ್ಷದ ಚಟುವಟಿಕೆಯಿಂದ ದೂರಾಗಿರುವ ಮರಿತಿಬ್ಬೇಗೌಡ, ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದರು. ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಆದರೆ ತಾಂತ್ರಿಕ ಕಾರಣದಿಂದಾಗಿ ಪಕ್ಷ ಸೇರ್ಪಡೆಯಾಗಿರಲಿಲ್ಲ.ಈ ನಡುವೆ ಗುರುವಾರ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇವರ ಅಧಿಕಾರಾವಧಿ ಜೂ.23ರವರೆಗೂ ಇತ್ತು. ಆದರೆ ಅವಧಿಗೆ ಮುನ್ನವೇ ಅಧಿಕಾರ ತ್ಯಜಿಸಿದ್ದಾರೆ. ಇನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶೀಘ್ರವೇ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − four =
Remember me
