ಬೆಂಗಳೂರು:ದೇಶ ಮಾತ್ರವಲ್ಲದೆ ರಾಜ್ಯದಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮಕೈಗೊಂಡಿರುವುದಲ್ಲದೆ, ಕೋವಿಡ್​ ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಮಾಸ್ಕ್​ ಕಡ್ಡಾಯ ನಿಯಮ ಸೇರಿದಂತೆ ಎಲ್ಲ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಹೊಸದೊಂದು ಆದೇಶವನ್ನು ಹೊರಡಿಸಿದೆ.
ರಾಜ್ಯದಲ್ಲಿ ಕಳೆದ 10 ದಿನಗಳಿಂದ ದೈನಂದಿನ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನಗತಿಯ ಏರಿಕೆ ಉಂಟಾಗಿದ್ದು, ಜೂ. 9ರಂದು 471 ಹೊಸ ಪ್ರಕರಣಗಳು ಹಾಗೂ ಪಾಸಿಟಿವ್ ಪ್ರಮಾಣ ಶೇ. 2.14 ಕಂಡುಬಂದಿದೆ. ಕೋವಿಡ್ 19 ಮೂರನೇ ಅಲೆಯ ನಂತರದ ಅವಧಿಯ ಏರಿಕೆ ಇದಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ಅಗತ್ಯವಾಗಿದೆ ಎಂದು ಅಭಿಪ್ರಾಯ ಪಟ್ಟಿರುವ ಆರೋಗ್ಯ ಇಲಾಖೆ ಹೊಸ ಆದೇಶ ಹೊರಡಿಸಿದೆ.
ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿರುವ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿರುವ ಇಲಾಖೆ, ಈ ಕುರಿತು ಮಾರ್ಷಲ್/ಪೋಲೀಸ್ ಸಿಬ್ಬಂದಿಯ ಸಹಾಯ ಪಡೆಯಲು ಸೂಚಿಸಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + three =
Remember me
