ಬೆಂಗಳೂರು:ಕರೊನಾ ನಾಲ್ಕನೇ ಅಲೆ ಪ್ರವೇಶ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಮಾಸ್ಕ್ ಧರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದ್ದು, ಜನನಿಬಿಡ ಹಾಗೂ ಒಳಾಂಗಣ ಸಭೆಗಳಲ್ಲಿ ಈ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ನಂತರ ಸುದ್ದಿಗಾರರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಈ ವಿಷಯ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ವಿಡಿಯೋ ಸಂವಾದ ನಡೆಸಲಿದ್ದಾರೆ. ಈ ಸಭೆಯಲ್ಲಿ ನೀಡಲಿರುವ ನಿರ್ದೇಶನ ನೋಡಿಕೊಂಡು ಮತ್ತೊಂದು ಸುತ್ತಿನ ಸಭೆ ನಡೆಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾವುದು. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸುವ ಉಪಕ್ರಮ ಸದ್ಯಕ್ಕಿಲ್ಲ. ಬೆಳವಣಿಗೆಯನ್ನು ಕಾದು ನೋಡಲು ಸಿಎಂ ಬೊಮ್ಮಾಯಿ‌ ನಿರ್ಧರಿಸಿದ್ದಾರೆ.
ಈ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಮಾರ್ಗಸೂಚಿ ಹೊರಡಿಸಿ, ವ್ಯಾಪಕ ಜನ ಜಾಗೃತಿಗೆ ಸಿಎಂ ಬೊಮ್ಮಾಯಿ‌ ಸೂಚಿಸಿದ್ದಾರೆ ಎಂದು ಡಾ.ಕೆ.ಸುಧಾಕರ್ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
