ಬೆಂಗಳೂರು:ಕಳೆದ ಎರಡು ದಿನಗಳಿಂದ ರಾಜ್ಯ ರಾಜಧಾನಿಯಲ್ಲಿ ಮಾಸ್ಕ್ ಹಾಕದವರಿಗೆ ದಂಡ ವಿಧಿಸುವ ಪ್ರಕ್ರಿಯೆ ಆಂದೋಲನದಂತೆ ನಡೆಯುತ್ತಿದೆ. ನಿನ್ನೆ (ಶುಕ್ರವಾರ) ಒಂದೇ ದಿನ ಲಕ್ಷಾಂತರ ರೂಪಾಯಿ ದಂಡ ವಸೂಲಾಗಿದೆ. ಇಷ್ಟಾದರೂ ಮಾಸ್ಕ್ ಹಾಕದೇ ತಿರುಗುವವರು, ಮಾರ್ಷಲ್‌ಗಳೊಂದಿಗೆ ವಾಗ್ವಾದಕ್ಕೆ ಇಳಿಯುವವರು ಅಲ್ಲಲ್ಲಿ ಕಂಡುಬರುತ್ತಲೇ ಇದ್ದಾರೆ.
ಈ ಹಿನ್ನೆಲೆಯಲ್ಲಿ, ಮಾಸ್ಕ್ ಹಾಕದವರ ವಿರುದ್ಧ ಕ್ರಮ ಕೈಗೊಳ್ಳುವ ವಿಷಯದಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ಪೊಲೀಸರು ಇನ್ನೂ ಒಂದು ಹೆಜ್ಜೆ ಮುಂದೆ ಇಟ್ಟಿದ್ದಾರೆ. ಸ್ಥಳದಲ್ಲೇ ಒಂದು ಸಾವಿರ ರೂ. ದಂಡ ಕಟ್ಟಲು ಯಾರು ಸಿದ್ಧರಾಗುವುದಿಲ್ಲವೋ ಅವರನ್ನು ಕೂಡಲೇ ಪೊಲೀಸ್ ಠಾಣೆಗೆ ಕರೆದೊಯ್ದು ವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.
ಇದನ್ನೂ ಓದಿರಿನನ್ನ ಮಗನ ಫೋಟೋ-ಹೆಸರು ಬಳಸಿದ್ರೆ ಬೆಂಕಿ ಹಚ್ಚಿಸ್ತೀನಿ: ಸೊಸೆ ವಿರುದ್ಧ ಸಿಡಿದೆದ್ದ ಡಿ.ಕೆ. ರವಿ ತಾಯಿ
ಮಾಸ್ಕ್ ಹಾಕದವರನ್ನು ಹಿಡಿದ ತಕ್ಷಣ ಅವರ ಮೊಬೈಲ್ ನಂಬರ್ ಮತ್ತು ಹೆಸರು, ವಿಳಾಸ ಮುಂತಾದ ವಿವರಗಳನ್ನು ಮಾರ್ಷಲ್‌ಗಳು ದಾಖಲಿಸಿಕೊಳ್ಳುತ್ತಾರೆ. ದಂಡ ಕಟ್ಟಿದರೆ ಸ್ಥಳದಲ್ಲೇ ಒಟಿಪಿ ಬರುವ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಠಾಣೆಯವರೆಗೆ ಹೋದವರು ನೋಟಿಸ್ ಪಡೆದು ಕೋರ್ಟ್‌ನಲ್ಲಿ ವಿಚಾರಣೆ ಎದುರಿಸಬೇಕಾಗುತ್ತದೆ. ಈ ಎಲ್ಲ ಅಧಿಕಾರವನ್ನು ಬೆಂಗಳೂರಿನಲ್ಲಿ ಮಾರ್ಷಲ್‌ಗಳು ಮತ್ತು ಪೊಲೀಸರಿಗೆ ನೀಡಲಾಗಿದ್ದು, ಗ್ರಾಮೀಣ ಭಾಗದಲ್ಲಿ ಪಂಚಾಯ್ತಿ ಅಧಿಕಾರಿಗಳಿಗೆ ನೀಡಲಾಗಿದೆ.
ದ್ವಿಚಕ್ರವಾಹನ ಓಡಿಸುವಾಗ ಇಬ್ಬರಿದ್ದು ಮಾಸ್ಕ್ ಹಾಕಿರದಿದ್ದರೆ ದಂಡ ವಿಧಿಸಲಾಗುತ್ತದೆ. ಒಬ್ಬರೇ ಇದ್ದು ಹೆಲ್ಮೆಟ್ ಧರಿಸಿದ್ದರೆ ದಂಡ ವಿಧಿಸುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್​ ಕಚೇರಿಯಲ್ಲೇ ಟಿವಿ ಕದ್ದ ಕಳ್ಳಮಂಜ!

VIDEO| ರೌಡಿಗಳಿಂದ ಸರ್ಕಲ್ ಇನ್​ಸ್ಪೆಕ್ಟರ್​ಗೆ ಹೂವಿನ ಅಭಿಷೇಕ! ಸಿಪಿಐ-ಸರ್ಕಾರದ ವಿರುದ್ಧ ಮಾಜಿ ಸಚಿವ ವಾಗ್ದಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 9 =
Remember me
