ಬೆಂಗಳೂರು:ಕಳೆದ ಎರಡು ವರ್ಷಗಳಿಂದ ಕರೊನಾ ಪರಿಸ್ಥಿತಿಯಿಂದ ಹೊರಬಂದಿರುವ ಜನರಿಗೆ ಮತ್ತೆ ಕೋವಿಡ್‌ 19 ಆತಂಕ ಎದುರಾಗಿದೆ. ಈ ಕುರಿತಾಗಿ ಸರ್ಕಾರ ಕೆಲವು ಜಾಗೃತಿ ನಿಯಮಗಳನ್ನು ಅನುಸರಿಸುವಂತೆ ಹೇಳಿದೆ.  ಈ ಕುರಿತಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ.
ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್ ಮಾತನಾಡಿ,  ರಾಜ್ಯದಲ್ಲಿ ಕರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್  ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ತಿಳಿಸಿದ್ದಾರೆ.
ಕರೊನಾ ಲಕ್ಷಣ ಇದ್ದರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ರಾಜ್ಯದಲ್ಲಿ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಭೆ ಮಾಡಿ ಚರ್ಚೆ ಮಾಡಿದ್ದೇವೆ. ಕೇಂದ್ರ ಸರ್ಕಾರ ಹಾಗೂ ತಜ್ಞರ ಜತೆ ಕೂಡ ಚರ್ಚೆ ಮಾಡಲಾಗಿದೆ. ಹೆಚ್ಚು ಸೋಂಕು ಪತ್ತೆ ಪರೀಕ್ಷೆ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಕ್ಸಿಜನ್​​ ಸಿದ್ಧವಾಗಿಡಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚನೆ ಕೋಡಲಾಗಿದೆ ಎಂದರು.
ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಟೆಸ್ಟ್​​ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರಷ್ಟೇ ನಿಷೇಧ, ನಿರ್ಬಂಧ ಇತ್ಯಾದಿ ಕ್ರಮಗಳ ಬಗ್ಗೆ ಯೋಚನೆ ಮಾಡುತ್ತೇವೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
ಬಿಯರ್ ವೆಜ್ / ನಾನ್ ವೆಜ್ ಎಂದು ನಿಮಗೆ ತಿಳಿದಿದೆಯೇ? ಒಂದು ಕ್ಲಿಕ್‌ನಲ್ಲಿ ಗೊಂದಲ ಪರಿಹರಿಸಿಕೊಳ್ಳಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − 2 =
Remember me
