ಬಾಗಲಕೋಟೆ:ಬಣಜಿಗ ಸಮಾಜದ ಮುಖಂಡ ಹಾಗೂ ಉದ್ಯಮಿ ಶಿವಾನಂದ ನಿಂಗನೂರ ಅವರು ಬೀಳಗಿ ತಾಲೂಕಿನ ರೊಳ್ಳಿ ಗ್ರಾಮದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಿದ್ದರು. ಇದರಲ್ಲಿ 30ಕ್ಕೂ ಹೆಚ್ಚು ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಕಾಶಿ ಪೀಠದ ಜಗದ್ಗುರು ಶ್ರೀ ಮಲ್ಲಿಕಾರ್ಜುನ ವಿಶ್ವಾರಾಧ್ಯ ಭಗವತ್ಪಾದರು ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕೋಡಿಹಳ್ಳಿ ಮಠದ ಜಗದ್ಗುರುಗಳು ಸೇರಿದಂತೆ ನಾಡಿನ ಹಲವಾರು ಹರ ಗುರು ಚರಮೂರ್ತಿಗಳು ಭಾಗವಹಿಸಿದ್ದರು.
ವಿಆರ್​​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ್ ಸಂಕೇಶ್ವರ್ ಅವರು ಭಾಗವಹಿಸಿ, ಹೊಸ ಜೀವನಕ್ಕೆ ಕಾಲಿಟ್ಟ ದಂಪತಿಗಳನ್ನು ಹರಸಿದರು. ಜತೆಗೆ ಮೂರನೇ ಬಾರಿಗೆ ಸಾಮೂಹಿಕ ವಿವಾಹ ಏರ್ಪಡಿಸಿ ಸಮಾಜ ಸೇವೆ ಮಾಡುತ್ತಿರುವ ಶಿವಾನಂದ ನಿಂಗನೂರ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಚಿವ ಮುರುಗೇಶ್ ನಿರಾಣಿ, ಮಾಜಿ ಸಚಿವ ಎಸ್​ಆರ್ ಪಾಟೀಲ್, ಮಾಜಿ ಶಾಸಕ ಜೆ.ಟಿ.ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ದಂಪತಿಗಳಿಗೆ ಶುಭ ಹಾರೈಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + ten =
Remember me
