ಬೆಂಗಳೂರುಕೆಎಎಸ್ ಪ್ರಿಲಿಮ್ಸ್‌ನಲ್ಲಿ ಕನ್ನಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ ಮತ್ತು ಮರು ಪರೀಕ್ಷೆಗೆ ಆಗ್ರಹಿಸಿ ಸೆ.2ರಂದು ಬೆಳಗ್ಗೆ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅಭ್ಯರ್ಥಿಗಳು ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದ್ದಾರೆ.
ಹೋರಾಟಕ್ಕೆ ಸಿನಿಮಾರಂಗ, ಸಾಹಿತ್ಯ ಕ್ಷೇತ್ರ, ಕನ್ನಡಪರ ಸಂಘಟನೆಗಳು, ರಾಜಕೀಯ ಪ್ರತಿನಿಧಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಕೇಂದ್ರಗಳು ಸೇರಿ ಹಲವು ಕ್ಷೇತ್ರಗಳ ಪ್ರತಿನಿಧಿಗಳು ಹೋರಾಟದಲ್ಲಿ ಭಾಗವಹಿಸಲಿದ್ದಾರೆ.
ಸಾಹಿತ್ಯ ವಲಯ ಮತ್ತು ಸಿನಿಮಾರಂಗದ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಪ್ರಮುಖರು ಭಾಗವಹಿಸುವ ಸಾಧ್ಯತೆಗಳಿವೆ. ಹಾಗೆಯೇ, ನಗರದಲ್ಲಿರುವ ರಾಜಕುಮಾರ್ ಅಕಾಡೆಮಿ, ಆಚಾರ್ಯ ಅಕಾಡೆಮಿ ಸೇರಿ ಹತ್ತಾರು ಕೋಚಿಂಗ್ ಕೇಂದ್ರಗಳು ಕೂಡ ಇದಕ್ಕೆ ಸಾಥ್ ನೀಡುತ್ತಿವೆ ಎಂದು ಹೋರಾಟಗಾರರು ತಿಳಿಸಿದ್ದಾರೆ.
ಇತ್ತೀಚಿನ ಕೆಎಎಸ್ ಮೇನ್ಸ್‌ನಲ್ಲಿ ಕನ್ನಡ ಮಾಧ್ಯಮಗಳಿಗಿಂತ ಇಂಗ್ಲಿಷ್ ಮಾಧ್ಯಮ ಅಭ್ಯರ್ಥಿಗಳೇ ದೊಡ್ಡ ಮಟ್ಟದಲ್ಲಿ ಆಯ್ಕೆಯಾಗುತ್ತಿದ್ದಾರೆ. ಇದಕ್ಕೆ ಪರೀಕ್ಷೆಗಳಲ್ಲಿನ ಗೊಂದಲಗಳೂ ಕಾರಣವಾಗಿವೆ. ಪರೀಕ್ಷೆಗಳನ್ನು ತಾಂತ್ರಿಕವಾಗಿ ಸರಿಯಾದ ರೀತಿಯಲ್ಲಿ ನಡೆಸಿದಾಗ ಸ್ಥಳೀಯರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಹೋರಾಟ ಮಾಡಲಾಗುತ್ತಿದೆ. ಈ ಹೋರಾಟವು ಕನ್ನಡ ಮಾಧ್ಯಮ ವಿದ್ಯಾರ್ಥಿಗ:ಳ ಪರವಾಗಿಯೇ ವಿನಾ ಇಂಗ್ಲಿಷ್ ಮಾಧ್ಯಮದ ವಿರುದ್ಧವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 17 =
Remember me
