ಮತ್ತೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತ ಸಂಗೀತ ವಿಭಾಗ ತೆರೆಯುವ ಚಿಂತನೆ ಇದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ. ಎನ್‌ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಶಿವಮೊಗ್ಗದ ಸಂಸ್ಕೃತ ಗ್ರಾಮ ಎಂದೇ ಕರೆಯಿಸಿಕೊಳ್ಳುವ ಮತ್ತೂರಿಗೆ ಗುರುವಾರ ಭೇಟಿ ನೀಡಿದ ಸಚಿವರು, ಅಲ್ಲಿ ಸಂಸ್ಕೃತ ವಿದ್ವಾಂಸರನ್ನು ಭೇಟಿ ಮಾಡಿ ಮಾತನಾಡಿದರು.
“ವಿದೇಶಗಳಲ್ಲಿ ಇಂದು ಸಂಸ್ಕೃತದ ಬಗ್ಗೆ ವಿಶೇಷ ಆಸಕ್ತಿ ಮೂಡಿದೆ. ನಾವು ನಮ್ಮ ಭಾಷೆಯನ್ನು ಕಡೆಗಣಿಸುವಂತಿಲ್ಲ. ನಮ್ಮ ಸರ್ಕಾರ ಮಾಗಡಿಯಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಿದೆ. ಈ ಹಿಂದೆ ಇಂಥ ಪ್ರಯತ್ನ ನಡೆದಿದ್ದರೂ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಈಗಾಗಲೇ 100 ಎಕರೆ ಜಾಗ ನಿಗದಿಯಾಗಿದೆ. ಇದಲ್ಲದೇ ಎಲ್ಲ ವಿವಿಗಳಲ್ಲೂ ಸಂಸ್ಕೃತ ಹಾಗೂ ಸಂಗೀತ ವಿಭಾಗ ತೆರೆಯುವ ಚಿಂತನೆ ಇದೆ ಎಂದು ಸಚಿವರು ತಿಳಿಸಿದರು.
ಸಾತ್ವಿಕ ರಾಜಕಾರಣಿ: ಪ್ರಧಾನಿ ಮೋದಿ ಅವರಿಂದ ಸೈ ಎನಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಪ್ರಧಾನಿಯ ಮೆಚ್ಚುಗೆಗೆ ಪಾತ್ರರಾಗಿ, ಪಕ್ಷದ ಕೇಂದ್ರ ನಾಯಕರ ನಿರ್ಧಾರದಂತೆ ಉಪಮುಖ್ಯಮಂತ್ರಿ ಆದವರು ಅಶ್ವತ್ಥನಾರಾಯಣಎಂದು ಆರ್‌ಎಸ್‌ಎಸ್‌ ದಕ್ಷಿಣ ಪ್ರಾಂತ ಬೌದ್ಧಿಕ ಪ್ರಮುಖ್‌ ಪಟ್ಟಾಭಿರಾಮ ಹೇಳಿದರು.
“ಜನರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗದಿದ್ದರೂ, ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವ ಸಾತ್ವಿಕ ರಾಜಕಾರಣಿ. ವೈದ್ಯ ಪದವಿ ಪಡೆದ ಅಶ್ವತ್ಥನಾರಾಯಣ ಅವರು ರಾಜಕೀಯಕ್ಕೆ ಬಂದು ಒಳ್ಳೆಯ ಹೆಸರು ಗಳಿಸಿದ್ದಾರೆ. ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿರುವ ಇವರು ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಈ ಎಲ್ಲ ಅನುಭವ ಈಗ ಅವರಿಗೆ ನೆರವಾಗುತ್ತಿದೆ ಎಂದರು.
ಕುವೆಂಪು ವಿವಿಯಲ್ಲಿ ‘ಶಂಕರಾಚಾರ್ಯ ಅದ್ವೈತ ಅಧ್ಯಯನ ಕೇಂದ್ರ’ ಸ್ಥಾಪಿಸುವಂತೆ ಪಟ್ಟಾಭಿರಾಮ ಅವರು ಸಚಿವರ ಬಳಿ ಮನವಿ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
