ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್​ ಗುರುವಾರ ಹೇಳಿದ್ದಾರೆ.
ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಕಾಮಗಾರಿ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಂಬುಲೆನ್ಸ್ ಮತ್ತು ಇತರೆ ಅಗತ್ಯ ವಾಹನಗಳನ್ನು ನಿಯೋಜಿಸುವ ಕೆಲಸ ಆಗಬೇಕಾಗಿದೆ. ಕಾಫಿ ಕೆಫೆ ಆರಂಭಿಸುವ ಸಂಬಂಧದ ಕೆಲಸವೂ ಆಗಬೇಕಿದೆ. ಜೊತೆಗೆ, ಕೆಲವು ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿ ನೇಮಕ ನಡೆಯಬೇಕಿದೆ. ಇವೆಲ್ಲವನ್ನೂ ಜುಲೈ 20ರ ಹೊತ್ತಿಗೆ ಪೂರೈಸಿ ವಿಮಾನ ನಿಲ್ದಾಣವನ್ನು ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗುವುದು.
ಕೇಂದ್ರ ನಾಗರಿಕ ವಿಮಾನ ನಿರ್ದೇಶನಾಲಯವು ಇಲ್ಲಿನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಎಸ್ಐಐಡಿಸಿ) ವಹಿಸಿದೆ. ಇದರೊಂದಿಗೆ ಶಿವಮೊಗ್ಗ ನಿಲ್ದಾಣವು ರಾಜ್ಯ ಸರ್ಕಾರದ ಸಂಸ್ಥೆಯ ವತಿಯಿಂದ ನಡೆಯಲಿರುವ ಕರ್ನಾಟಕದ ಮೊದಲನೇ ವಿಮಾನ ನಿಲ್ದಾಣವಾಗಲಿದೆ ಎಂದು ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ 20 ವಿಮಾನಗಳು ಬಂದಿಳಿದಿವೆ. ಇದರಿಂದಾಗಿ 12 ಲಕ್ಷ ರೂ. ಆದಾಯ ಬಂದಿದೆ. ಆ.11ರಂದು ನಿಲ್ದಾಣ ಕಾರ್ಯಾರಂಭಗೊಳಲಿದ್ದು, ಅಂದು ಮೊದಲ ವಿಮಾನ‌ ಹಾರಾಟ ನಡೆಸಲಿದೆ. ಈ ಐತಿಹಾಸಿಕ ಸನ್ನಿವೇಶಕ್ಕೆ ಸಾಕ್ಷಿಯಾಗಲು ಜಿಲ್ಲೆಯ ರಾಜಕೀಯ ಮುಖಂಡರು ಮತ್ತು ಜನಪ್ರತಿನಿಧಿಗಳೂ ಪಾಲ್ಗೊಳ್ಳಲಿದ್ದಾರೆ. ಎಲ್ಲಾ ಯೋಜನೆಯಂತೆ ನಡೆದರೆ ಆ.11ರಂದು ಬೆಂಗಳೂರಿನಿಂದ ಹೊರಡುವ ವಿಮಾನವು ಶಿವಮೊಗ್ಗ ನಿಲ್ದಾಣದಲ್ಲಿ ಇಳಿಯಲಿದೆ ಎಂದರುದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ದೆಹಲಿಯಲ್ಲಿ ಮಳೆಯ ರೌದ್ರಾವತಾರ; ಜುಲೈ 16ರ ವೆರೆಗೆ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ
ನಿರ್ಮಾಣ ಹಂತದ ವಿಜಯಪುರ ವಿಮಾನ ನಿಲ್ದಾಣದಲ್ಲಿ ರಾತ್ರಿ ಲ್ಯಾಂಡಿಂಗ್ ವ್ಯವಸ್ಥೆ ಕಲ್ಪಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು ತಕ್ಷಣವೇ ಆ ಸೌಲಭ್ಯವನ್ನೂ ಕಲ್ಪಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ನಿಲ್ದಾಣದ ಮೂಲಯೋಜನೆಯಲ್ಲಿ ರಾತ್ರಿ ಲ್ಯಾಂಡಿಂಗ್ ಸೌಲಭ್ಯ ಸೇರಿರಲಿಲ್ಲ. ಈ ಸೌಲಭ್ಯಕ್ಕೆ ವ್ಯವಸ್ಥೆ ಮಾಡಲು 12 ಕೋಟಿ ರೂ. ಹೆಚ್ಚುವರಿಯಾಗಿ ಬೇಕಾಗುತ್ತದೆ. ಇದುವರೆಗೆ ಸುಮಾರು 350 ಕೋಟಿ ರೂ. ಖರ್ಚಾಗಿದೆ. ರನ್ ವೇ ಪೂರ್ಣಗೊಂಡಿದ್ದು ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಕೆಲಸಗಳೆಲ್ಲ ಮೂರು ತಿಂಗಳಲ್ಲಿ ಮುಗಿಯಲಿವೆ. ಕೆಲವು ಉಪಕರಣಗಳ ಅಳವಡಿಕೆ ಮಾತ್ರ ಬಾಕಿ ಇದೆ.
ನಿರ್ಮಾಣ ಹಂತದಲ್ಲಿರುವ ಹಾಸನ, ರಾಯಚೂರು ಮತ್ತು ಕಾರವಾರ ವಿಮಾನ ನಿಲ್ದಾಣಗಳ ಕಾರ್ಯ ಪ್ರಗತಿ ಪರಿಶೀಲಿಸಿದರು. ರಾಜ್ಯ ಬಜೆಟ್​ನಲ್ಲಿ ಘೋಷಣೆಯಾದ ಧರ್ಮಸ್ಥಳ, ಕೊಡಗು ಮತ್ತು ಚಿಕ್ಕಮಗಳೂರು ಏರ್​ಸ್ಟ್ರಿಪ್​​​​​​​​ಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆಯೂ ಅಧಿಕಾರಿಗಳ ಜೊತೆ ಚರ್ಚೆಸಿದ್ದಾರೆ.
ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ ಗುಪ್ತ, ಕೆಎಸ್ಐಐಡಿಸಿ ವ್ಮವಸ್ಥಾಪಕ ನಿರ್ದೇಶಕ ಎಂ.ಆರ್.ರವಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ್ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 11 =
Remember me
