ಬೆಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ನಿಮ್ಮ ಕೊಡುಗೆ ಅಪಾರವಾಗಿದೆ. ಅದಕ್ಕಾಗಿ ನಾವು ನಿಮಗೆ ಆಭಾರಿ ಆಗಿರುತ್ತೇವೆ ಎನ್ನುವ ಮೂಲಕ ಬೃಹತ್‌ ಮತ್ತು ಮಧ್ಯಮ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್​ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್​. ಸಂತೋಷ್​ ಅವರ ಕಾಲೆಳೆದಿದ್ದಾರೆ.
ಇಂದು ಟ್ವೀಟ್​ ಮಾಡಿರುವ ಎಂ.ಬಿ. ಪಾಟೀಲ್​, ಬಿ.ಎಲ್​. ಸಂತೋಷ್​ರವರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ ಲಿಂಗಾಯತ ನಾಯಕರನ್ನು ಮುಗಿಸಿದ್ದೀರಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ನಡೆದ ಹುಸಿ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಿಕ್ತು ವಿಚಿತ್ರ ತಿರುವು! ಇಬ್ಬರ ಜಗಳಕ್ಕೆ ಪೊಲೀಸರಿಗೆ ಪೀಕಲಾಟ…
ಇದೀಗ ಉಳಿದಿರುವ ಏಕೈಕ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಮುಗಿಸಲು ಅವರ ವಿರುದ್ಧ ಬಸವನಗೌಡ ಪಾಟೀಲ್​ ಅವರನ್ನು ಎತ್ತಿ ಕಟ್ಟುವುದರ ಜೊತೆಗೆ ನಿಮ್ಮ ಕಟ್ಟಾ ಶಿಷ್ಯ ಪ್ರತಾಪ್​ ಸಿಂಹ ಅವರ ಹೆಗಲ ಮೇಲೆ ಬಂದೂಕು ಇಟ್ಟು ಗುರಿನೆಟ್ಟಿರುವುದನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ.
ಕರ್ನಾಟಕದ ಇತ್ತೀಚಿನ ರಾಜಕಾರಣವನ್ನು ಒಂದೇ ವಾಕ್ಯದಲ್ಲಿ ಹೇಳುವುದಾದರೆ, ವಿಶ್ವೇಶ್ವರ ಭಟ್​ ಅವರು ಹೇಳಿರುವಂತೆ “ಅತಿಯಾದ ‘ಸಂತೋಷ’ವೇ ದುಃಖಕ್ಕೆ ಕಾರಣ” ಎಂದು ವ್ಯಂಗ್ಯವಾಡಿರುವ ಎಂ.ಬಿ. ಪಾಟೀಲ್​, ಲಿಂಗಾಯತರ ನಂತರ ನಿಮ್ಮ ಗುರಿ ಒಕ್ಕಲಿಗರಾ, ದಲಿತರಾ? ಎಂದು ಪ್ರಶ್ನಿಸುವ ಮೂಲಕ ಸಂತೋಷ್​ ಅವರಿಗೆ ಚಾಟಿ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
.@blsanthoshರವರೆರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ.
ನೀವು ಬಿಜೆಪಿಯಲ್ಲಿನ ಅನೇಕ ಲಿಂಗಾಯತ ನಾಯಕರನ್ನು ಮುಗಿಸಿದ್ದೀರಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ.
ಇದೀಗ ಉಳಿದಿರುವ, ಏಕೈಕ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿಗಳಾದ ಶ್ರೀ@BSBommaiಯವರನ್ನು ಮುಗಿಸಲು…
— M B Patil (@MBPatil)June 17, 2023

ಹನಿಮೂನ್ ಪೀರಿಯಡ್‌ನಲ್ಲೇಕೆ ಹರಸಾಹಸ? ಕಾಂಗ್ರೆಸ್​ ವಿರುದ್ಧ ಮಾಜಿ ಎಂಎಲ್​ಸಿ ಅರುಣ ಶಹಾಪುರ ವ್ಯಂಗ್ಯ

ವಾನರ ಸೇನೆ ಪಾತ್ರಧಾರಿ ಮುಖಕ್ಕೆ ಸಿಎಂ ಏಕನಾಥ್​​ ಶಿಂಧೆ ಹೋಲಿಕೆ: ಟ್ವಿಟ್ಟಿಗನಿಗೆ ಎದುರಾಯ್ತು ಸಂಕಷ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − one =
Remember me
