ಬೆಂಗಳೂರು:ರಾಜ್ಯ ರಾಜಧಾನಿಯ ನಮ್ಮ ಮೆಟ್ರೋಗೆ ಬಸವೇಶ್ವರ ಮೆಟ್ರೋ ಎಂದು ನಾಮಕರಣ ಮಾಡುವಂತೆ ಇದೀಗ ಬೇಡಿಕೆಗಳು ಕೇಳಿಬಂದಿದ್ದು, ಈ ಕುರಿತಂತೆ ಸಿಎಂ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಬೃಹತ್​ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್​ ಹೇಳಿದ್ದಾರೆ.
ಇದನ್ನೂ ಓದಿ:ಚಂದ್ರಗ್ರಹಣಕ್ಕೆ ಸಂಬಂಧಿಸಿದ ವಿಶೇಷ ಸಂಗತಿ; ಗ್ರಹಣದ ಸಮಯದಲ್ಲಿ ಪ್ರಯಾಣ ಮಾಡಬಹುದಾ?
ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರಿಡಬೇಕು ಎಂಬ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಎಂ.ಬಿ.ಪಾಟೀಲ ಹೇಳಿದರು.
ಈ ಬಗ್ಗೆ ಮಾತನಾಡಿದ ಸಚಿವರು, “ನಮ್ಮ ಮೆಟ್ರೊಗೆ ಬಸವೇಶ್ವರರ ಹೆಸರಿಡಬೇಕು ಎಂಬ ಬೇಡಿಕೆಗಳು ಕೇಳಿಬಂದಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರಿಟ್ಟಂತೆ ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರಿಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು” ಎಂದರು.
ಇದನ್ನೂ ಓದಿ:ಸಾಲ ತೀರಿಸುವಂತೆ ರೈತರನ್ನು ಬಲವಂತ ಮಾಡಬೇಡಿ: ಕೊಮ್ಮೇರಹಳ್ಳಿ ಮಠದ ಪುರುಷೋತ್ತಮಾನಂದನಾಥ ಸ್ವಾಮೀಜಿ ಹೇಳಿಕೆ
ವಿಜಯಪುರ ಜಿಲ್ಲೆಗೆ ಬಸವೇಶ್ವರ ಜಿಲ್ಲೆ ಎಂದು ಹೆಸರಿಡುವಂತೆ ಅನೇಕರು ಕೇಳಿದ್ದಾರೆ. ಬಸವೇಶ್ವರರ ಹೆಸರು ಇಡಲು ಯಾರ ವಿರೋಧವೂ ಇಲ್ಲ. ನಾನು ಬಸವಣ್ಣನವರ ಅಪ್ಪಟ್ಟ ಅನುಯಾಯಿ, ಎಲ್ಲಾ ವಿಷಯಗಳ ಬಗ್ಗೆ ಆಲೋಚಿಸಿ, ಚರ್ಚಿಸಬೇಕಾಗುತ್ತದೆ ಎಂದು ಹೇಳಿದರು.
Lunar Eclipse 2023: ಚಂದ್ರಗ್ರಹಣ ಸಮಯದಲ್ಲಿ ಈ ಕೆಲಸ ಮಾಡಬಾರದಂತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 3 =
Remember me
