ಬೆಂಗಳೂರು:ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೇ ಟರ್ಮಿನಲ್​ ಇದೀಗ ಮತ್ತಷ್ಟು ವಿಸ್ತಾರಗೊಂಡಿದ್ದು, ಇಂದು ಈ ಅನುಭವವನ್ನು ಪಡೆಯಲು ಖುದ್ದಾಗಿ ವಿಧಾನಸೌಧ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಬೃಹತ್​ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್​ ವಿಧಾನಸೌಧದಿಂದ ಮೈಲಸಂದ್ರಕ್ಕೆ ತೆರಳಿದರು. ಪ್ರಯಾಣದ ಕುರಿತಂತೆ ಟ್ವಿಟರ್​ ಖಾತೆಯಲ್ಲಿ ತಮ್ಮ ಅಭಿಪ್ರಾಯವನ್ನು ಈ ರೀತಿ ತಿಳಿಸಿದ್ದಾರೆ.
ಇದನ್ನೂ ಓದಿ:#NoBindiNoBusiness | ಹಿಂದೂಗಳಿಂದ ಮತ್ತೆ ಅಭಿಯಾನ, ಟ್ರೆಂಡ್ ಆಯ್ತು ಕ್ಯಾಂಪೇನ್..
‘ಖುಷಿ ತಂದ ನಮ್ಮ ಮೆಟ್ರೋ ಪ್ರಯಾಣ’ ಎಂಬ ಶೀರ್ಷಿಕೆಯಡಿ ಟ್ವೀಟ್​ ಮಾಡಿದ ಸಚಿವರು, “ಕೆಂಗೇರಿ ಸಮೀಪದ ಮೈಲಸಂದ್ರದಲ್ಲಿ ಬುಧವಾರ ನಿಗದಿಯಾಗಿದ್ದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಧಾನಸೌಧದಿಂದ ಕೆಂಗೇರಿ ಬಸ್ ಟರ್ಮಿನಲ್​ವರೆಗೆ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದು ಖುಷಿ ತಂದಿದೆ” ಎಂದರು.
ಖುಷಿ ತಂದ ನಮ್ಮ ಮೆಟ್ರೋ ಪ್ರಯಾಣ!ಕೆಂಗೇರಿ ಸಮೀಪದ ಮೈಲಸಂದ್ರದಲ್ಲಿ ಬುಧವಾರ ನಿಗದಿಯಾಗಿದ್ದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಧಾನಸೌಧದಿಂದ ಕೆಂಗೇರಿ ಬಸ್ ಟರ್ಮಿನಲ್ ವರೆಗೆ `#ನಮ್ಮಮೆಟ್ರೋ’ದಲ್ಲಿ ಪ್ರಯಾಣ ಮಾಡಿದ್ದು ಖುಷಿ ತಂದಿದೆ.
ದೇಶದ ಬೇರೆ ಬೇರೆ ಭಾಗಗಳಲ್ಲಿ ಮೆಟ್ರೋದಲ್ಲಿ ಸಂಚರಿಸಿ, ಅನುಭವ…pic.twitter.com/7Mq3ZlGiUn
— M B Patil (@MBPatil)October 18, 2023

“ದೇಶದ ಬೇರೆ ಬೇರೆ ಭಾಗಗಳಲ್ಲಿ ಮೆಟ್ರೋದಲ್ಲಿ ಸಂಚರಿಸಿ, ಅನುಭವ ಪಡೆದಿದ್ದೇನೆ. ಇಂದು ವಿಧಾನಸೌಧದಿಂದ ಮೈಲಸಂದ್ರಕ್ಕೆ ಕೇವಲ 30 ನಿಮಿಷಗಳಲ್ಲಿ ತಲುಪಿದೆ. ಮೆಟ್ರೋ ಸೌಲಭ್ಯವು ನಗರದ ಸಂಚಾರ ವ್ಯವಸ್ಥೆಯ ರೂಪುರೇಷೆಗಳನ್ನೇ ಆಮೂಲಾಗ್ರವಾಗಿ ಬದಲಿಸುತ್ತಿದೆ” ಎಂದು ಹೇಳಿದರು.
ಇದನ್ನೂ ಓದಿ:BBK S10: ‘ರಣಶಕ್ತಿ’ ತಂಡದಲ್ಲಿ ಭಿನ್ನಾಭಿಪ್ರಾಯ!; ಹೀಗಾದ್ರೆ ಈ ವಾರದ ಟಾಸ್ಕ್​ ಸೋಲುವುದು ಖಚಿತ?
“ಬೆಂಗಳೂರಿನ ಉತ್ಪಾದಕತೆ ಗಣನೀಯವಾಗಿ ಹೆಚ್ಚಲಿದೆ. ಶಬ್ದ, ಧೂಳು ಮತ್ತು ಇಂಗಾಲದ ಮಾಲಿನ್ಯಗಳಿಗೆ ಪರಿಹಾರವಾಗಿದೆ. ಆರೋಗ್ಯದ ಸಮಸ್ಯೆಗಳಿಂದಲೂ ತಕ್ಕ ಮಟ್ಟಿಗೆ ಪಾರಾಗಬಹುದು” ಎಂದು ಟ್ವೀಟ್​ ಮಾಡಿ ತಿಳಿಸಿದರು.
ಅ.23 ಪ್ರಭಾಸ್​ ಜನ್ಮದಿನ; ರೆಬೆಲ್​ ನಟನ ಫ್ಯಾನ್ಸ್​ಗಾಗಿ ರಿ-ರಿಲೀಸ್​ ಆಗಲಿದೆ ಈ ಸೂಪರ್​ ಹಿಟ್​ ಸಿನಿಮಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 4 =
Remember me
