ಬೆಂಗಳೂರು:ಸೆಪ್ಟಂಬರ್​ 11 ರಂದು ಖಾಸಗಿ ವಾಹನಗಳ ಒಕ್ಕೂಟಗಳು ರಾಜ್ಯ ಸರ್ಕಾರದ ವಿರುದ್ಧ ಬೃಹತ್​ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದು, ರಾಜಧಾನಿಯಲ್ಲಿ ಮುಷ್ಕರದ ಕಾವು ಜನಸಾಮಾನ್ಯರ ಮೇಲೆ ಭಾರೀ ಪ್ರಭಾವ ಬೀರಿದೆ. ಈ ವೇಳೆ ಉದ್ದೇಶಪೂರ್ವಕವಾಗಿ ಸ್ಟ್ರೈಕ್ ಮಾಡಿಸುತ್ತಿರುವವರ ವಿರುದ್ಧ ಕಠಿಣ ಶಿಕ್ಷೆ ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್​ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ಬಿರಿಯಾನಿ ಜತೆ ಹೆಚ್ಚು ಮೊಸರು ಕೇಳಿದ್ದಕ್ಕೆ ಥಳಿಸಿದ ಹೋಟೆಲ್ ಸಿಬ್ಬಂದಿ; ವ್ಯಕ್ತಿ ಸಾವು
“ಖಾಸಗಿ ಒಕ್ಕೂಟಗಳು ಇಂದು ಮುಷ್ಕರ ನಡೆಸುತ್ತಿದೆ. ಆದ್ರೆ, ಈ ಮಧ್ಯೆ ಕೆಲ ಕಿಡಗೇಡಿಗಳು ಬಲವಂತವಾಗಿ ಬಂದ್​ ಮಾಡಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಅಂತವರ ವಿರುದ್ಧ ಕಠಿಣ ಶಿಕ್ಷೆ ಮತ್ತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.
ಇದನ್ನೂ ಓದಿ:ಜಿ20 ಶೃಂಗಸಭೆಯಲ್ಲಿ ಭಾಗವಹಿಸಿದ ಮಮತಾ ಬ್ಯಾನರ್ಜಿ; ಆಕಾಶ ಬೀಳುತ್ತಾ ಎಂದು ಕಿಡಿ ಕಾರಿದ ಕಾಂಗ್ರೆಸ್‍ನ ಹಿರಿಯ ನಾಯಕ!
“ನಮ್ಮ ಸರ್ಕಾರ ಯಾವಗಲೂ ಕೂಡ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದೆ. ಇದನ್ನು ಮಾತುಕತೆಯಲ್ಲಿ ಪರಿಹರಿಸಿಕೊಳ್ಳಬೇಕು. ಈ ಬಗ್ಗೆ ನಾನು ಕೂಡ ವಿನಂತಿ ಮಾಡುತ್ತೇನೆ. ಖಾಸಗಿ ಅಸೋಸಿಯೇಷನ್, ಮಾನ್ಯ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರೊಡನೆ ಮಾತನಾಡಲಿ. ಅವಶ್ಯಕತೆಯಿದ್ದರೆ ಸಿಎಂ ಜತೆ ಕೂಡ ಮಾತಾಡಿಸುತ್ತೇವೆ. ಈ ರೀತಿ ಪ್ರತಿಭಟನೆ ಮಾಡುವುದರಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗುತ್ತದೆ” ಎಂದು ಹೇಳಿದರು.
https://www.vijayavani.net/man-beaten-to-death-for-extra-raita-at-meridian-biryani-restaurant-in-punjagutta
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 × two =
Remember me
