ಬೆಂಗಳೂರು:ಜಿಎಸ್​ಟಿಯಲ್ಲಿನ ಇ-ವೇ ಬಿಲ್ ಗೊಂದಲ, ತೈಲ ಬೆಲೆ ಏರಿಕೆ ವಿರೋಧಿಸಿ ಶುಕ್ರವಾರ ದೇಶಾದ್ಯಂತ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ರಾಜ್ಯದಲ್ಲಿ ಸರಕು- ಸಾಗಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ.
ಮುಷ್ಕರ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಜ್ಯ ಲಾರಿ ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಷಣ್ಮುಗಪ್ಪ, ಅಗತ್ಯ ಸೇವೆಗಳಾದ ಹಾಲು, ಹಣ್ಣು-ತರಕಾರಿ, ಪೆಟ್ರೋಲ್-ಡೀಸೆಲ್ ಲಾರಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಇನ್ನುಳಿದ ಆರು ಲಕ್ಷ ಲಾರಿಗಳು ನಿಂತಲ್ಲಿಯೇ ನಿಲ್ಲಲಿವೆ. ತುಮಕೂರು ರಸ್ತೆಯ ನೈಸ್ ರಸ್ತೆ ಬಳಿ ಲಾರಿಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಲಾಗುತ್ತದೆ. ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ದೇಶಾದ್ಯಂತೆ ಮುಷ್ಕರ ನಡೆಯುತ್ತಿದ್ದು, ಸದ್ಯ ಶುಕ್ರವಾರ ಒಂದು ದಿನ ಮಾತ್ರ ಪ್ರತಿಭಟನೆ ನಡೆಸಲಾಗುತ್ತಿದೆ. ಒಂದು ವೇಳೆ ಸರ್ಕಾರ ಈಗಲೂ ತೈಲ ಬೆಲೆ ಇಳಿಸದಿದ್ದರೆ, ಮಾ.5ರಂದು ಸಭೆ ನಡೆಸಿ ಮಾ.15ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗುತ್ತದೆ. ಹಾಗೆಯೇ ವಿಮೆ ಹೆಚ್ಚಳದಿಂದ ಸರಕು ಸಾಗಣೆ ವಾಹನ ಉದ್ಯಮದಲ್ಲಿ ಹಲವು ಸಮಸ್ಯೆ ಎದುರಿಸುವಂತಾಗಿದೆ. ಇ-ವೇ ಬಿಲ್, ಹಸಿರು ತೆರಿಗೆ ಹೆಚ್ಚಳ, ಬಿಎಸ್ 6 ವಾಹನಗಳ ವೆಚ್ಚ, ವಾಹನಗಳ ಬಿಡಿಭಾಗಗಳ ದರ ಹೆಚ್ಚಳ ಸೇರಿ ಹಲವು ಸಮಸ್ಯೆಗಳು ಎದುರಿಸುವಂತಾಗಿದೆ. ಬೇರೆ ರಾಜ್ಯಗಳಲ್ಲಿ ಡೀಸೆಲ್ ಬೆಲೆ ಕಡಿಮೆ ಇರುವುದರಿಂದ ಆ ರಾಜ್ಯಕ್ಕೆ ಹೋಗುವ ನಮ್ಮ ಲಾರಿಗಳು ಅಲ್ಲಿಯೇ ಡೀಸೆಲ್ ತುಂಬಿಸುತ್ತಿವೆ. ಅದರಿಂದ ರಾಜ್ಯಕ್ಕೆ ಪ್ರತಿ ದಿನ 1.60 ಕೋಟಿ ರೂ. ನಷ್ಟವಾಗುತ್ತಿದೆ. ಬಿಜೆಪಿ ಆಡಳಿತದಲ್ಲಿರುವ ಬೇರೆ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿಮೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಾಡಿಲ್ಲ. ರಾಜ್ಯ ಸರ್ಕಾರ ಕನಿಷ್ಠ ನಾಲ್ಕು ರೂ. ಡೀಸೆಲ್ ಬೆಲೆಯನ್ನಾದರೂ ಕಡಿಮೆ ಮಾಡಬೇಕು. ಟ್ರಕ್​ಗಳಿಗೆ ಒಂದು ಕಿ.ಮೀ.ಗೆ 26 ರೂ. ಖರ್ಚಾಗುತ್ತಿದೆ. ಇದು ಹೀಗೆ ಮುಂದುವರಿದರೆ, ಉದ್ಯಮ ನಡೆಸುವುದು ಕಷ್ಟವಾಗುತ್ತದೆ. ಹೀಗಾಗಿ ಡೀಸೆಲ್, ಪೆಟ್ರೋಲ್ ಅನ್ನು ಜಿಎಸ್​ಟಿ ವ್ಯಾಪ್ತಿಗೆ ತರಬೇಕೆಂದು ಒತ್ತಾಯಿಸಿದರು.
ಸ್ಕ್ರ್ಯಾಪ್ ನೀತಿಗೆ ಸಂಪೂರ್ಣ ವಿರೋಧ
ಕೇಂದ್ರ ಸರ್ಕಾರವು ಜಾರಿಗೊಳಿಸುತ್ತಿರುವ ಸ್ಕ್ರ್ಯಾಪ್ ನೀತಿಗೆ ಸಂಪೂರ್ಣ ವಿರೋಧವಿದೆ. ನಮ್ಮ ವಾಹನಗಳನ್ನು ಸ್ಕ್ರ್ಯಾಪ್​ಗೆ ಕೊಡುವುದಿಲ್ಲ. ಕೇಂದ್ರ ಸರ್ಕಾರ ಟಾಟಾ ಮತ್ತು ಅಶೋಕ್ ಲೈಲ್ಯಾಂಡ್ ಕಂಪನಿಗಳ ಜತೆ ಸೇರಿಕೊಂಡು ಈ ನೀತಿ ಜಾರಿಗೆ ತರಲು ಮುಂದಾಗಿದೆ. ಹಾಗೆಯೇ ರಾಷ್ಟ್ರೀಯ ಹೆದ್ದಾರಿ ಟೋಲ್​ಗಳಲ್ಲಿ ದುಪ್ಪಟ್ಟು ಶುಲ್ಕ ಹೆಸರಿನಲ್ಲಿ ಲೂಟಿ ಮಾಡಲಾಗುತ್ತಿದೆ. ಕೆಲ ಸಂಸ್ಥೆಗಳ ಅವಧಿ ಮುಗಿದರೂ ಟೋಲ್ ಶುಲ್ಕ ಸಂಗ್ರಹ ನಡೆಯುತ್ತಿದೆ ಎಂದು ಷಣ್ಮುಗಪ್ಪ ಆರೋಪಿಸಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 − 9 =
Remember me
