ಶಿವಮೊಗ್ಗ:ಕೊಡಚಾದ್ರಿ ಬೆಟ್ಟದ ಸಮೀಪದ ಹಿಡ್ಲುಮನೆ ಜಲಪಾತ ನೋಡಲು ಹೋಗಿದ್ದ 29 ವರ್ಷದ ಮೆಡಿಕಲ್ ವಿದ್ಯಾರ್ಥಿಯೊಬ್ಬ ಬಂಡೆಯಲ್ಲಿ ಸಿಲುಕಿ ಅಪಾಯಕ್ಕೆ ತುತ್ತಾಗಿದ್ದ ಘಟನೆ ಭಾನುವಾರ ಸಂಭವಿಸಿದೆ.
ಬೆಂಗಳೂರಿನಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ, ಹಾಸನ ಮೂಲದ ಯುವಕ ಅಮೋಘ ತನ್ನ ಸ್ನೇಹಿತರಾದ ತಮಿಳುನಾಡು ಮೂಲದ ಸಂಜೀವ್, ಜೈಪುರ ಮೂಲದ ಮಧು ಎಂಬುವರೊಂದಿಗೆ ಕೊಡಚಾದ್ರಿ ಪ್ರವಾಸಕ್ಕೆ ಶನಿವಾರ ರಾತ್ರಿ ಬಂದಿದ್ದರು. ಇಲ್ಲಿನ ಹೋಂ ಸ್ಟೇನಲ್ಲಿ ತಂಗಿದ್ದರು. ಭಾನುವಾರ ಮುಂಜಾನೆ ಜೀಪ್‍ನಲ್ಲಿ ಕೊಡಚಾದ್ರಿ ಗಿರಿ ಹತ್ತಿದ ಮೂವರೂ ನಂತರ ನೇರವಾಗಿ ಹಿಡ್ಲಮನೆ ಜಲಪಾತಕ್ಕೆ ತೆರಳಿದ್ದರು. ಮೂವರು ಫಾಲ್ಸ್ ಕೆಳಗಿನಿಂದ ಮೇಲ್ಭಾಗಕ್ಕೆ ತೆರಳಿದ್ದರು. ಆದರೆ ಫಾಲ್ಸ್​ನ ಪಕ್ಕದಲ್ಲೇ ಕೆಳಗಿಳಿಯಲು ಹೋದ ಅಮೋಘ ಅಲ್ಲಿಯೇ ಸಿಲುಕಿಕೊಂಡಿದ್ದಾನೆ. ಇನ್ನಿಬ್ಬರು ಬೇರೆ ಮಾರ್ಗದಿಂದ ಕೆಳಗೆ ಇಳಿದಿದ್ದಾರೆ.
ಮೇಲೆ ಹತ್ತಲು ಆಗದೆ, ಕೆಳಗೆ ಇಳಿಯಲು ಆಗದೇ ಮಧ್ಯದಲ್ಲಿ ಸಿಕ್ಕಿಬಿದ್ದ ಅಮೋಘ ಅಪಾಯಕ್ಕೆ ತುತ್ತಾಗಿದ್ದ. ಜಲಪಾತದ ಮಧ್ಯಭಾಗದ ಕಲ್ಲಿನ ಮೇಲೆ ಒಂದೇ ಕಾಲಿನಲ್ಲಿ ಎರಡು ಗಂಟೆ ಕಾಲ ನಿಂತಿದ್ದ ಅಮೋಘ, ಸಹಾಯಕ್ಕಾಗಿ ಗೋಗರೆಯುತ್ತಿದ್ದ. ಸ್ವಲ್ಪ ಅಲುಗಾಡಿದರೂ 80 ಅಡಿ ಪ್ರಪಾತಕ್ಕೆ ಬೀಳುವ ಸಾಧ್ಯತೆಯಿತ್ತು. ಅಮೋಘ ಅಪಾಯದಲ್ಲಿ ಸಿಲುಕಿದ್ದನ್ನು ನೋಡಿದ ಸ್ನೇಹಿತರಿಬ್ಬರೂ ಆತನ ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ. ಆಗ ಕೆಳಗಿದ್ದ ಕೆಲ ಪ್ರವಾಸಿಗರು, ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ಅಪಾಯದಿಂದ ಅಮೋಘನನ್ನು ಹೊರ ತರಲು ಆಗಲಿಲ್ಲ.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ‌, ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿದಂತೆ 50 ಜನರ ತಂಡ ಸತತ ಐದು ಗಂಟೆ ಕಾರ್ಯಾಚರಣೆ ನಡೆಸಿ ಅಮೋಘನನ್ನು ಸುರಕ್ಷಿತವಾಗಿ ಕೆಳಗಿಳಿಸುವಲ್ಲಿ ಯಶಸ್ವಿಯಾದರು.
2 ಕಿ.ಮೀ. ಓಡಾಡಿ ಸಿಕ್ಕಸಿಕ್ಕವರಿಗೆ ಇರಿದ, ರಾತ್ರಿಯಿಡೀ ಪೊಲೀಸರಿಗೂ ಟಾರ್ಚರ್​ ಕೊಟ್ಟ! ಈತನ ಹಿಸ್ಟರಿ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 4 =
Remember me
