ಶಿವಮೊಗ್ಗ:ಬಾಡಿಗೆ ಮನೆಯಲ್ಲಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಮೂವರು ಮೆಡಿಕಲ್ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ, ತಮಿಳುನಾಡು ಮೂಲದ ವಿದ್ಯಾರ್ಥಿಗಳಾದ ವಿಘ್ನರಾಜ್, ಪಾಂಡಿದೊರೈ, ವಿನೋದ್ ಕುಮಾರ್ ಬಂಧಿತರು. ಆರೋಪಿಗಳು ಮೆಡಿಕಲ್ ವ್ಯಾಸಾಂಗ ಪೂರ್ಣಗೊಳಿಸಿ, ಇಂಟರ್ನ್ಶಿಪ್ ಮಾಡುತ್ತಿದ್ದರು.
ಆರೋಪಿಗಳು ಹೈಟೆಕ್ ಕೃಷಿ ಮೂಲಕ ಮನೆಯಲ್ಲೇ ಗಾಂಜಾ ಬೆಳೆದು ಇತರೆ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 227 ಗ್ರಾಂ ಗಾಂಜಾ, 1.53 ಕೆಜಿ ಹಸಿ ಗಾಂಜಾ, 10 ಗ್ರಾಂ ಚರಸ್, ಗಾಂಜಾ ಬೀಜಗಳಿರುವ ಸಣ್ಣ ಬಾಟಲಿ, 3 ಕೆನಾಬಿಲ್ ಆಯಿಲ್ ಸಿರಂಜ್, ರೋಲಿಂಗ್ ಪೇಪರ್, 2 ಹುಕ್ಕಾ ಕೊಳವೆ, 4 ಹುಕ್ಕಾ ಕ್ಯಾಪ್, ಗಾಂಜಾ ಗಿಡದ ಕಾಂಡ, 19 ಸಾವಿರ ರೂ. ನಗದ ಹಾಗೂ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:8 ವರ್ಷದ ಬಾಲಕನ ಆಧಾರ್ ಕಾರ್ಡ್​ನಲ್ಲಿ ದಾಖಲೆ ಎಲ್ಲವೂ ಸರಿಯಾಗಿದೆ; ಆದರೆ….
ಮೂವರು ಮೆಡಿಕಲ್ ವಿದ್ಯಾರ್ಥಿಗಳು ಬಾಡಿಗೆ ಮನೆಯ ಒಳಗೆ ಹೈಟೆಕ್ ಟೆಂಟ್ ನಿರ್ಮಾಣ ಮಾಡಿಕೊಂಡು ಗಾಂಜಾ ಬೆಳೆಯುತ್ತಿದ್ದರು. ಬಳಿಕ ಗಾಂಜಾವನ್ನು ಪುಡಿ ಮಾಡಿ ಇತರೆ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಸಣ್ಣ ಸುಳಿವು ಸಿಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ದಾಳಿ ನಡೆಸಿದ್ದಾರೆ. ಈ ವೇಳೆ ಮೆಡಿಕಲ್ ವಿದ್ಯಾರ್ಥಿಗಳ ಕೃತ್ಯ ಬೆಳಕಿಗೆ ಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 11 =
Remember me
