ಬೆಂಗಳೂರು:ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ ಭವಿಷ್ಯಕ್ಕೆ ಮಾರಕವಾಗುವ ಪಶ್ಚಿಮ ಘಟ್ಟ ಕುರಿತ ಕೇಂದ್ರ ಪರಿಸರ ಸಚಿವಾಲಯದ ಅಧಿಸೂಚನೆ ವಿರೋಧಿಸಿ ಮಲೆನಾಡು ಪ್ರದೇಶ ಪ್ರತಿನಿಧಿಸುವ ಶಾಸಕರ ಸಭೆ ಜು.18ರಂದು ನಿಗಧಿಯಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಈ ಸಭೆ ಕರೆದಿದ್ದಾರೆ. ಕಳೆದ ವಾರ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯವು ಕರ್ನಾಟಕ ಒಳಗೊಂಡಂತೆ ಒಟ್ಟು 56,826 ಚದರ ಕಿಲೋ ಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮವೆಂದು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು ಎರಡು ತಿಂಗಳು ಗಡುವು ನೀಡಿದೆ. ಒಂದು ವೇಳೆ, ಈ ಅಧಿಸೂಚನೆ ಅನುಷ್ಠಾನಗೊಂಡರೆ ಮಲೆನಾಡು ನಿವಾಸಿಗಳ ಬದುಕು ಮಸುಕಾಗುತ್ತದೆ. ಅಭಿವೃದ್ದಿ ಕುಂಟುತ್ತದೆ ಹಾಗೂ ತೀವ್ರ ಆರ್ಥಿಕ ಹಾನಿಗೆ ತುತ್ತಾಗಬೇಕಾಗುತ್ತದೆ. ಕರ್ನಾಟಕ ಸರ್ಕಾರ ಈ ಹಿಂದೆ ಕಸ್ತೂರಿ ರಂಗನ್ ಸಮಿತಿ ವರದಿ ತಿರಸ್ಕರಿಸಿದೆ ಹಾಗೂ ತನ್ನ ನಿಲುವಿನ ಬಗ್ಗೆ ಸ್ಪಷ್ಟ ಅಭಿಪ್ರಾಯ ತಿಳಿಸಿದೆ. ಆ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬುದು ಈ ಭಾಗದ ಶಾಸಕರ ಆಗ್ರಹವಾಗಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ಕರಡು ಅಧಿಸೂಚನೆ ವಿರೋಧಿಸಿ ಜು.18ರಂದು ನಡೆಯುವ ಸಭೆಯಲ್ಲಿ ಗೊತ್ತುವಳಿ ಮಂಡನೆ ಮಾಡಲಾಗುವುದು ಎಂದೂ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬಿಜೆಪಿಯಲ್ಲೇ ವಿರೋಧ:ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿದ್ದರೂ ಕಸ್ತೂರಿ ರಂಗನ್ ವರದಿ ಯಥಾವತ್ ಜಾರಿಗೆ ಬಿಜೆಪಿಯಲ್ಲೇ ವಿರೋಧವಿದೆ. ಸಚಿವ ಆರಗ ಜ್ಞಾನೇಂದ್ರ, ಶಾಸಕ ಹರತಾಳು ಹಾಲಪ್ಪ ಆರಂಭದಿಂದಲೂ ಕಸ್ತೂರಿ ರಂಗನ್ ವರದಿಯ ಯಥಾವತ್ ಜಾರಿಗೆ ವಿರೋಧ ವ್ಯಕ್ತಪಡಿಸುತ್ತ ಬಂದಿದ್ದಾರೆ. 2017ರಲ್ಲಿ ರಾಜ್ಯದಲ್ಲಿದ್ದ ಕಾಂಗ್ರೆಸ್ ಸರ್ಕಾರ ಕಸ್ತೂರಿ ರಂಗನ್ ವರದಿಯ 34 ಶಿಫಾರಸುಗಳ ಪೈಕಿ ನಾಲ್ಕು ಅಂಶಗಳನ್ನು ಹೊರತುಪಡಿಸಿ ವರದಿಯ ಉಳಿದ ಅಂಶಗಳ ಅನುಷ್ಠಾನಕ್ಕೆ ಸಮ್ಮತಿ ಇದೆ ಎಂದು ಕೇಂದ್ರಕ್ಕೆ ತಿಳಿಸಿತ್ತು. ಸಿದ್ದರಾಮಯ್ಯ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದ ರಮಾನಾಥ ರೈ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚನೆ ಮಾಡಲಾಗಿತ್ತು. ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸುವುದು ಈ ಸಮಿತಿ ಕೆಲಸವಾಗಿತ್ತು. ಸಮಿತಿ ಸದಸ್ಯರಾಗಿ ಅಂದಿನ ಸಚಿವರಾದ ವಿನಯಕುಮಾರ್ ಸೊರಕೆ ಹಾಗೂ ಟಿ.ಬಿ.ಜಯಚಂದ್ರ ಇದ್ದರು. ಈ ಸಮಿತಿ ರಾಜ್ಯಾದ್ಯಂತ ಪ್ರವಾಸ ಮಾಡಿ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಸರ್ಕಾರದ ಮಟ್ಟದಲ್ಲಿ ರ್ಚಚಿಸಿ ಕಸ್ತೂರಿ ರಂಗನ್ ವರದಿ ಯಥಾವತ್ ಜಾರಿಗೆ ಆಕ್ಷೇಪ ವ್ಯಕ್ತಪಡಿಸಲಾಗಿತ್ತು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:nineteen + sixteen =
Remember me
