ಬೆಂಗಳೂರು:ರಾಜ್ಯ ಸರ್ಕಾರವನ್ನು ಟೀಕಿಸಿದವರನ್ನು ದಮನ ಮಾಡುವ ಸರ್ವಾಧಿಕಾರಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಪಕ್ಷದ ಬೆಂಗಳೂರು ಶಾಸಕರ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡಲಾಗುತ್ತಿದ್ದು, ಇದರ ವಿರುದ್ದ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದರು.11 ಜನ ಶಾಸಕರು ಫೇಕ್ ಪತ್ರ ಎಂದು ದೂರು ಕೊಟ್ಟ ತಕ್ಷಣ ಮಾಧ್ಯಮದವರಿಗೆ ನೊಟಿಸ್ ಕೊಡಲಾಗುತ್ತಿದೆ. ಮೊದಲು ಪತ್ರಕ್ಕೆ ಸಹಿ ಮಾಡಿದವರನ್ನು ಕರೆಯಿಸಿ ವಿಚಾರಣೆ ಮಾಡಬೇಕಿತ್ತು. ಅವರು ಸಹಿ ಮಾಡಿದ್ದು ಫೇಕಾ ಅಥವಾ ನಿಜಾನಾ ಅನ್ನುವುದನ್ನು ವಿಚಾರಣೆ ಮಾಡಬೇಕು ಎಂದರು. ಶಾಸಕರು ಸಹಿ ಮಾಡಿರುವ ಬಗ್ಗೆ ಎ್ಎಸ್‌ಎಲ್ ಲ್ಯಾಬ್ ಗೆ ಕಳುಹಿಸಿ ತನಿಖೆ ನಡೆಸಲಿ, ಅದನ್ನು ಬಿಟ್ಟು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳನ್ನು ವಿಚಾರಣೆ ಕರೆಯುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.ಗುತ್ತಿಗೆದಾರರು ಬಿಲ್ ಆಗಿಲ್ಲ ಎಂದು ರಾಜ್ಯಪಾಲರಿಗೆ ದೂರು ನೀಡಿದರೆ, ಅವರ ವಿರದ್ದವೂ ಕೇಸ್ ದಾಖಲಿಸಲಾಗುತ್ತಿದೆ. ನಮ್ಮ ಅವಧಿಯಲ್ಲಿ ಗುತ್ತಿಗೆದಾರರು ಆರೋಪ ಮಾಡಿದ್ದರು, ನಾವು ಇದೇ ರೀತಿ ನಡೆದುಕೊಂಡೆವಾ? ರಾಜ್ಯಪಾಲರಿಗೂ ಗೌರವ ಇಲ್ಲವೇ ? ಎಂದು ಪ್ರಶ್ನಿಸಿದರು.ಗುತ್ತಿಗೆದಾರರು ನಿಮ್ಮೆಲ್ಲರ ಮನೆ ಬಾಗಿಲು ತಟ್ಟಿದ್ದಾರೆ. ಕೊನೆಗೆ ರಾಜ್ಯಪಾಲರು, ಪ್ರತಿಪಕ್ಷದ ನಾಯಕರನ್ನು ಭೇಟಿ ಮಾಡಿದ್ದಾರೆ. ನಿಮ್ಮ ವಿರುದ್ದ ಧ್ವನಿ ಎತ್ತಿದರೆ ಅವರ ವಿರುದ್ದ ಕೇಸ್ ಹಾಕುತ್ತೀರಿ, ನಿಮ್ಮ ವಿರುದ್ದ ಯಾರೂ ಧ್ವನಿ ಎತ್ತಬಾರದು ಅನ್ನುವ ಧೋರಣೆ ತಾಳಿರುವುದು ಖಂಡನೀಯ ಎಂದರು.
ಯಾರೂ ಬಿಜೆಪಿ ತೊರೆಯಲ್ಲರಾಜ್ಯ ಸರ್ಕಾರ ಭ್ರಷ್ಟಾಚಾರ ಹಾಗೂ ಕಮಿಷನ್ ದಂಧೆಯನ್ನು ಮುಚ್ಚಿಕೊಳ್ಳಲು ಬಿಜೆಪಿ ಶಾಸಕರ ಪಕ್ಷಾಂತರದ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಜೊತೆ ನಾನು ಮಾತನಾಡಿದ್ದು, ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದ್ಲಿ ಎಂದರು.ಬಿಜೆಪಿಯ ಕೆಲ ಶಾಸಕರು ಸ್ಥಳೀಯವಾಗಿರುವ ಸಮಸ್ಯೆಗಳನ್ನು ಹೇಳಿದ್ದಾರೆ. ಅದನ್ನು ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೇವೆ. ಎಲ್ಲವನ್ನು ಬಗೆ ಹರಿಸುತ್ತೇವೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದರು.ಸರ್ಕಾರ ನಿಗಧಿ ಮಾಡಿರುವ ದರ ಪ್ರಕಾರವೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಕಾರ್ಡ್‌ದಾರರಿಗೆ ನೀಡಬೇಕು. ತೂಕ ಮತ್ತು ದರದಲ್ಲಿ ವ್ಯತ್ಯಾಸವಾಗುತ್ತಿರುವ ದೂರು ಬಂದರೆ ಕ್ರಮ ವಹಿಸಲಾಗುವುದು. ಕಾಳಸಂತೆಯಲ್ಲಿ ನಡೆಯುವ ವ್ಯವಹಾರಗಳನ್ನು ಸಹಿಸುವುದಿಲ್ಲ. ಅಂಗಡಿ ಲೈಸೆನ್ಸ್ ಪಡೆದು ಬೇರೆಯವರು ನಡೆಸುತ್ತಿದ್ದರೆ ಕಾನೂನು ಕ್ರಮ ಆಗಲಿದೆ ಎಂದು ಸಚಿವ ಮುನಿಯಪ್ಪ ತಿಳಿಸಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − fourteen =
Remember me
