ಬೆಂಗಳೂರು:ನಾಡಪ್ರಭು ಕೆಂಪೇಗೌಡರ ಸ್ಮರಣಾರ್ಥ ‘ಪ್ರಗತಿಯ ಪ್ರತಿಮೆ’ಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸ್ಥಾಪಿಸಲಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅದನ್ನು ನ.11ರಂದು ಅನಾವರಣಗೊಳಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.
ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣ ಮಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಡೆಸಿದ ಪೂರ್ವಭಾವಿ ಸಭೆಯಲ್ಲಿ ಸಚಿವರಾದ ಅಶ್ವತ್ಥನಾರಾಯಣ, ಆರ್.ಅಶೋಕ್, ಬೈರತಿ ಬಸವರಾಜ, ಎಸ್.ಟಿ. ಸೋಮಶೇಖರ್, ಮುನಿರತ್ನ, ಡಾ‌. ಸುಧಾಕರ್, ನಾರಾಯಣಗೌಡ ಹಾಜರಿದ್ದರು.
ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ‌ ಪ್ರತಿಮೆ ಅನಾವರಣ ಪ್ರಯುಕ್ತ ಹಮ್ಮಿಕೊಂಡಿರುವ ಮೃತ್ತಿಕಾ ಸಂಗ್ರಹ ಅಭಿಯಾನ ಈಗಾಗಲೇ ನಾಡಿನಾದ್ಯಂತ ನಡೆಯುತ್ತಿದೆ. ಅದನ್ನು ಯಶಸ್ವಿಗೊಳಿಸುವ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳ ಜತೆ ವೀಡಿಯೊ ಸಂವಾದ ನಡೆಸಿ ಕ್ರಮಕೈಗೊಳ್ಳಲಾಗಿದೆ.
‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’: ನಿರೀಕ್ಷೆಗೂ ಮೀರಿ ನಿಜವಾಯ್ತಾ ಕಾರ್ಣಿಕ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
