ಬೆಂಗಳೂರು:ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಒದಗಿಸುವ ಕುರಿತು ಕಳೆದ ಕೆಲವು ದಿನಗಳಿಂದ ಬೇಡಿಕೆ ವ್ಯಕ್ತವಾಗುತ್ತಲೇ ಇದ್ದು, ಸಿಎಂ ಮನೆ ಮುಂದೆ ಪ್ರತಿಭಟನೆ ನಡೆಸುವ ಹಂತದವರೆಗೂ ಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ಮತ್ತೊಂದು ಸುತ್ತಿನ ಸಭೆ ನಡೆದಿದ್ದು, ಹೊಸದೊಂದು ನಿರ್ಧಾರ ಹೊರಬಿದ್ದಿದೆ.
ಇಂದಿನ ಸಭೆ ಹಾಗೂ ಅಲ್ಲಿ ಕೈಗೊಂಡ ನಿರ್ಧಾರದ ಕುರಿತು ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮಿಜಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಇಂದು ಸಚಿವ ಸಿ.ಸಿ. ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿನ ನಿರ್ಣಯಗಳನ್ನು ಸ್ವಾಮೀಜಿ ತಿಳಿಸಿದರು.
ಸಚಿವ ಸಿ.ಸಿ.ಪಾಟೀಲ್ ಮತ್ತು ಶಾಸಕ ಯತ್ನಾಳ್ ಅವರು ಮುಖ್ಯಮಂತ್ರಿಯವರ ಜತೆ ಮಾತನಾಡಿ ಆಗಸ್ಟ್ 22ರ ಒಳಗೆ ಮೀಸಲಾತಿ ಒದಗಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ನಮ್ಮ ಹೋರಾಟ ಮುಂದೂಡಿದ್ದೇವೆ. ಒಂದು ವೇಳೆ ಆಗಸ್ಟ್ 22ರ ಒಳಗೆ ಅವರು ಮೀಸಲಾತಿ ಘೋಷಣೆ ಮಾಡದಿದ್ದರೆ, ಸಿಎಂ ನಿವಾಸದ ಎದುರು ಸತ್ಯಾಗ್ರಹ ನಡೆಸುತ್ತೇವೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.
ವಿಶ್ವಪರ್ಯಟನೆಯಲ್ಲಿ ಗಗನಸುಖಿ: ನಮಸ್ಕಾರ ದೇವರು.. ಇದು ಡಾಕ್ಟರ್ ಬ್ರೋ..!

ದೀರ್ಘ ಕಾಲ ಗೈರಾಗಿದ್ದ ತಂದೆ ಕೆಲಸದಿಂದ ವಜಾ, ‘ಅಪ್ಪನಿಗೆ ಕೆಲ್ಸ ಕೊಡಿ’ ಎಂಬ ಪುತ್ರಿಯ ಕೋರಿಕೆಗೆ ಮರುಗಿ ಉದ್ಯೋಗ ಕೊಟ್ಟ ಅಧಿಕಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
