ಬೆಂಗಳೂರು:ಕರೊನಾ ಸೋಂಕು, ನೌಕರರ ಮುಷ್ಕರದ ನಡುವೆಯೂ ಕೆಎಸ್ಸಾರ್ಟಿಸಿ ನೌಕರರ ವೇತನ ಹೆಚ್ಚಳಕ್ಕೆ ಮುಂದಾಗಿರುವ ಅಧಿಕಾರಿಗಳು, ಈ ಕುರಿತು ರ್ಚಚಿಸಲು ನೌಕರ ಸಂಘಟನೆ ಜತೆ ಮಾತುಕತೆ ನಡೆಸಲಿದ್ದಾರೆ.
6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಏ.7ರಿಂದ 21ರವರೆಗೆ ಸಾರಿಗೆ ನೌಕರರ ಮುಷ್ಕರ ನಡೆಸಿದ್ದರು. ಆದರೆ, ಸರ್ಕಾರ ಮಾತ್ರ ಬೇಡಿಕೆ ಈಡೇರಿಕೆಗೆ ಒಪ್ಪಿರಲಿಲ್ಲ. ಅಂತಿಮವಾಗಿ ಹೈಕೋರ್ಟ್ ಸೂಚನೆ ಮೇರೆಗೆ ಮುಷ್ಕರ ಕೈಬಿಟ್ಟಿದ್ದ ನೌಕರರು ಕೆಲಸಕ್ಕೆ ಹಾಜರಾಗಿದ್ದ್ದು. ಇದೀಗ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಮುಂದಾಗಿರುವ ಅಧಿಕಾರಿಗಳು ಅದಕ್ಕಾಗಿ ಮೇ 3ರಂದು ಸಭೆ ನಡೆಸುತ್ತಿದ್ದಾರೆ. ಅದರಲ್ಲಿ ಕೆಎಸ್ಸಾರ್ಟಿಸಿ ಅಧಿಕಾರಿಗಳು, ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ 5 ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
2020ರಿಂದ ಹೆಚ್ಚಳ:ಸಾರಿಗೆ ನೌಕರರ ಮುಷ್ಕರದ ಸಂದರ್ಭದಲ್ಲಿ 6ನೇ ವೇತನಾ ಆಯೋಗದ ಶಿಫಾರಸಿನ ಬದಲು ಶೇ.8 ವೇತನ ಹೆಚ್ಚಳ ಮಾಡುವ ಕುರಿತು ಸಾರಿಗೆ ನಿಗಮಗಳು ತಿಳಿಸಿದ್ದವು. ಅದಕ್ಕೆ ನೌಕರರು ಒಪ್ಪಿರಲಿಲ್ಲ. ಅದರ ನಡುವೆಯೇ ನೌಕರರ ಮುಷ್ಕರ ಹಿಂಪಡೆದಿದ್ದು, ವೇತನ ಹೆಚ್ಚಳದ ಯಾವುದೇ ಭರವಸೆಯೂ ದೊರಕಿರಲಿಲ್ಲ. ಇದೀಗ ಕೆಎಸ್ಸಾರ್ಟಿಸಿಯಿಂದಲೇ ವೇತನ ಹೆಚ್ಚಳ ಸಭೆ ಆಯೋಜಿಸಲಾಗಿದ್ದು, ನೌಕರರಿಗೆ ವೇತನ ಹೆಚ್ಚಳ ಭರವಸೆ ದೊರೆತಂತಾಗಿದೆ. ಅದರ ಪ್ರಕಾರ 2020ರ ಜ.1ರಿಂದ ವೇತನ ಹೆಚ್ಚಳದ ಬಗ್ಗೆ ರ್ಚಚಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಕ್ರಮ ನಿಷೇಧಕ್ಕೆ ಅರ್ಜಿ ಸಲ್ಲಿಸಲು ಸೂಚನೆ:ಮುಷ್ಕರದ ಸಂದರ್ಭದಲ್ಲಿ ನೌಕರರ ವಜಾ, ಅಮಾನತು ಮತ್ತು ವರ್ಗಾವಣೆಯಂತಹ ಶಿಕ್ಷೆ ವಿಧಿಸಲಾಗಿತ್ತು. ಅದರ ಕುರಿತಂತೆ ನೌಕರರು ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಹೈಕೋರ್ಟ್ ನೌಕರರ ಮೇಲೆ ಕೈಗೊಂಡಿರುವ ಕ್ರಮಗಳ ಇತ್ಯರ್ಥಕ್ಕೆ ಕ್ರಮ ಕೈಗೊಂಡು, ವರದಿ ನೀಡುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಸೂಚಿಸಿದೆ. ಆ ಹಿನ್ನೆಲೆಯಲ್ಲಿ ನಿಗಮಗಳು ಶಿಕ್ಷೆಗೊಳಗಾದ ನೌಕರರು ಸಂಬಂಧಪಟ್ಟ ಪ್ರಾಧಿಕಾರದಲ್ಲಿ ಮನವಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಡಿಸೆಂಬರ್‌ವರೆಗೂ ಇರುತ್ತೆ ಈ ಕರೊನಾ ಕಾಟ: ಎಚ್ಚರಿಕೆ ನೀಡಿದ ಡಾ. ಮಂಜುನಾಥ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
