
ಬೆಂಗಳೂರು:ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಮೇಕೆದಾಟು ಯೋಜನೆಗೆ ಪರಿಸರವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ಈಗಾಗಲೇ ರಾಜ್ಯದಲ್ಲಿ ಹಲವು ಯೋಜನೆಗಳಿಂದಾಗಿ ಆಗುತ್ತಿರುವ ಪ್ರಾಕೃತಿಕ ದುಷ್ಪರಿಣಾಮಗಳನ್ನು ನೋಡುತ್ತಿದ್ದೇವೆ. ಆದ್ದರಿಂದ ಇನ್ನಷ್ಟು ಅನಾವುತ ಆಗುವುದಕ್ಕೆ ಅವಕಾಶ ನೀಡಬಾರದು ಎಂದು ಪರಿಸರಕ್ಕಾಗಿ ನಾವು ಸಂಘಟನೆಯು ನಿರ್ಣಯಿಸಿದೆ.ಮೇಕೆದಾಟು ಯೋಜನೆಯಲ್ಲಿ 60 ಟಿಎಂಸಿ ನೀರು ಸಂಗ್ರಹಿಸಿ ಅದನ್ನು ವಿದ್ಯುತ್ ಉತ್ಪಾದನೆಗೆ ಬಳಸಿಕೊಳ್ಳಬಹುದು ಎಂದು ಸರ್ಕಾರ ಹೇಳುತ್ತಿದೆ. ಆದರೆ, 60 ಟಿಎಂಸಿ ನೀರು ನೆಪದಲ್ಲಿ ನಾವು 100 ಟಿಎಂಸಿ ನೀರು ಹಿಡಿದಿಟ್ಟುಕೊಳ್ಳಬಹುದಾದ ಅರಣ್ಯವನ್ನು ಕಳೆದುಕೊಳ್ಳಲು ಸಿದ್ಧರಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.ಪಶ್ಚಿಮಘಟ್ಟದಲ್ಲಿ ಗುಡ್ಡಗಳು ಕುಸಿತ ಮತ್ತು ಕೇರಳದಲ್ಲಿ ಆಗಿರುವ ಅನಾವುತವನ್ನು ನೋಡಿ ಪಾಠ ಕಲಿಯಬೇಕಿದೆ. ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಇನ್ನಷ್ಟು ಗಂಡಾಂತರ ತಪ್ಪಿದ್ದಲ್ಲ ಎಂದು ಪರಿಸರವಾದಿಗಳು ಅಭಿಪ್ರಾಯಿಸಿದ್ದಾರೆ.ಮೇಕೆದಾಟು ಯೋಜನೆಯ ಜಾರಿಗೆ ಮುನ್ನಾ ವಾಸ್ತವವನ್ನು ಅರ್ಥ ಮಾಡಿಕೊಳ್ಳಬೇಕು. ನಮ್ಮನ್ನು ತಮಿಳುನಾಡು ವಿರೋಧ ಎಂದರೂ ಪರವಾಗಿಲ್ಲ. ಪರಿಸರದ ದೃಷ್ಟಿಯಿಂದ ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − five =
Remember me
