ಬೆಂಗಳೂರು:ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರನ್ನು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಅಜೀವ ಸದಸ್ಯರನ್ನಾಗಿ ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.
ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸಂಘ ಹಾಗೂ ವಿವಿಧ ಶಿಕ್ಷಕ ಸಂಘಟನೆಗಳ ಹೋರಾಟ ಸಮನ್ವಯ ಸಮಿತಿಯ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದವು. ಕೊನೆ ಕ್ಷಣದಲ್ಲಿ ಸಚಿವರು ಪ್ರತಿಭಟನೆ ಮಾಡದಂತೆ ಮನವಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲು ಶಾಸಕರ ಭವನದಲ್ಲಿ ಸಭೆ ಕರೆದರು.
ಇದನ್ನೂ ಓದಿ:ನೀವು ಸಿಎಂ ಆಗೋದಾದ್ರೆ ಜೆಡಿಎಸ್‌ ಶಾಸಕರೆಲ್ಲ ಜೈ ಅಂತೀವಿ: ಶಾಸಕ ಎಚ್‌.ಡಿ. ರೇವಣ್ಣ ಕೊಟ್ರು ಆಫರ್‌
ಈ ವೇಳೆ ಮಾತನಾಡಿದ ಅವರು, ನಮಗೆ ಸರ್ಕಾರಿ, ಖಾಸಗಿ ಶಿಕ್ಷಕರು ಎಂಬ ತಾರತಮ್ಯ ಇಲ್ಲ. ಸದಸ್ಯತ್ವ ನೀಡಲು ನಿಯಮಗಳನ್ನು ರೂಪಿಸುತ್ತಿದ್ದು, ಅಧಿಕೃತವಾಗಿ ಆದೇಶ ಹೊರಡಿಸಲಾಗುವುದು. ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಧಾವಿಸುವ ಸಲುವಾಗಿ ಶಿಕ್ಷಣ ನಿಧಿಯ ಸದಸ್ಯತ್ವ ನೀಡಿ ಆ ಮೂಲಕ ಸೌಲಭ್ಯಗಳನ್ನು ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಅನುದಾನಕ್ಕೆ ಒಳಪಡಿಸುವುದು: 1995-2000ರ ಅವಧಿಯಲ್ಲಿ ಆರಂಭವಾದ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೊಳಪಡಿಸುವ ಕುರಿತು ಈಗಾಗಲೇ ಮುಖ್ಯಮಂತ್ರಿ ಬಳಿ ಚರ್ಚೆ ಮಾಡಿದ್ದೇನೆ. ಬಜೆಟ್‌ನಲ್ಲಿ ಇದರ ೋಷಣೆಯಾಗಬೇಕಾಗಿತ್ತು. ಆದರೆ, ಆಗಿಲ್ಲ. ಬದಲಾಗಿ ಪೂರಕ ಬಜೆಟ್‌ನಲ್ಲಿ ಇದರ ಅನುಷ್ಠಾನ ಮಾಡುವಂತೆ ಕೋರಿದ್ದೇನೆ. ಈ ಬಗ್ಗೆ ಸಿಎಂ ಬಳಿ ಮತ್ತೊಮ್ಮೆ ಮಾತನಾಡಿ ಸ್ಪಷ್ಟವಾದ ಭರವಸೆ ಪಡೆಯುತ್ತೇನೆ. 896 ಶಾಲೆಗಳನ್ನು ಅನುದಾನಕ್ಕೊಳಪಡಿಸಿದಲ್ಲಿ ರಾಜ್ಯ ಸರ್ಕಾರಕ್ಕೆ 138 ಕೋಟಿ ರೂ.ಗಳ ಅಗತ್ಯವಿದೆ ಎಂದರು.
ಮಾವೋವಾದಿಗಳಿಂದ ಐಇಡಿ ಸ್ಪೋಟ: ಮೂವರು ಪೊಲೀಸ್ ಸಿಬ್ಬಂದಿ ಸಾವು

‘ಮೋದಿ ಸರ್ಕಾರ ಹೀಗೊಂದು ಪುಸ್ತಕ ಬರೆದರೆ ಅದು ಜಗತ್ತಿನಲ್ಲೇ ಅತಿ ಹೆಚ್ಚು ಮಾರಾಟವಾಗಬಹುದು’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 6 =
Remember me
