ಬೆಂಗಳೂರು:ಒತ್ತಡದ ಬದುಕು ಪ್ರತಿಯೊಬ್ಬರಿಗೂ ಮಾನಸಿಕ ಅಸ್ವಸ್ಥತೆಗೆ ಕಾರಣವಾಗುತ್ತಿದೆ. ಶಿಸ್ತು, ಸಂಯಮದಲ್ಲಿ ಜೀವನ ಸಾಗಿಸುವುದರ ಮೂಲಕ ಇನ್ನೊಬ್ಬರಿಗೆ ಮಾದರಿಯಾಗಬೇಕು ಎಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ವೈದ್ಯರಾದ ಡಾ. ಆಂಜನಪ್ಪ ಟಿ.ಎಚ್ ಅವರು ಸಲಹೆ ನೀಡಿದರು.
ಇದನ್ನೂ ಓದಿ:ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಡಾ. ವಿಜಯ ಕುಮಾರ್​
ನಗರದ ಕೆ.ಆರ್.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಪ್ತ ಸಲಹಾ ಸಮಿತಿಯ ವತಿಯಿಂದ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ”ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯ ಅರಿವು” ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆಧುನಿಕ ಯುಗದಲ್ಲಿ ಯುವಜನತೆ ಅದರಲ್ಲೂ ಕಾಲೇಜು ವಿದ್ಯಾರ್ಥಿಗಳು ಮನೋ ರೋಗಕ್ಕೆ ಒಳಗಾಗಿ ಮಾನಸಿಕ ಸ್ಥಿತಿ ಅಸ್ವಸ್ಥ ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ಯೋಗ, ಧ್ಯಾನ, ಪ್ರಾಣಾಯಾಮ ರೂಢಿಸಿಕೊಳ್ಳಬೇಕು. ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಬಹುಮುಖ್ಯ. ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಸಲಹೆ ನೀಡಿದರು.

ಮಾನಸಿಕ ಒತ್ತಡದಿಂದ ಬಳಲುತ್ತಿರುತ್ತಾರೆ:ದೇಶದ ಜನಸಂಖ್ಯೆಯಲ್ಲಿ ಯುವಜನತೆ ಹೆಚ್ಚಾಗಿದ್ದು, 15ರಿಂದ 24ರ ವಯೋಮಾನದವರೇ ಗಣಿನೀಯ ಸಂಖ್ಯೆಯಲ್ಲಿದ್ದಾರೆ. ಯುವಜನತೆಯಲ್ಲಿ ಶೇ.14ರಷ್ಟು ಮಂದಿ ನಾನಾ ಬಗೆಯ ಮಾನಸಿಕ ಒತ್ತಡದಿಂದ ಬಳಲುತ್ತಿರುತ್ತಾರೆ ಎಂಬುದು ಅಧ್ಯಯನ ವರದಿಗಳಿಂದ ತಿಳಿದುಬಂದಿದೆ. ಹಾಗಾಗಿ ಕಾಲೇಜು ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಹಾಗೂ ದುಶ್ಚಟಗಳಿಗೆ ದಾಸರಾಗದಂತೆ ತಡೆಯುವುದು ಮುಖ್ಯವೆನಿಸಿದೆ ಎಂದು ಹೇಳಿದರು.

ಪ್ರಾಂಶುಪಾಲರಾದ ಪ್ರತಿಭಾ ಪಾರ್ಶ್ವನಾಥ್ ಮಾತನಾಡಿ, ಹದಿಹರೆಯರಲ್ಲಿ ಮಾನಸಿಕ ಸಮಸ್ಯೆ ಉಂಟಾಗಲು ಪ್ರಮುಖ ಕಾರಣ ಮಿತಿ ಮೀರಿದ ಆಸೆ ಆಕಾಂಕ್ಷೆಗಳು, ಮುಂದಾಲೋಚನೆ ಇಲ್ಲದ ನಿರ್ಧಾರ ಹಾಗೂ ವಾಸ್ತವಿಕತೆಯಿಂದ ಭಿನ್ನವಾಗಿ ಯೋಚಿಸುವುದು. ನೀವು ಮಾಡುವ ಕೆಲಸ ಹಾಗೂ ವೃತ್ತಿ ಮತ್ತು ಪ್ರವೃತ್ತಿಯ ಬಗ್ಗೆ ಹೆಚ್ಚು ಕಾಳಜಿ ವಹಿಸಿ. ನಿಮ್ಮ ನೆಚ್ಚಿನ ಹವ್ಯಾಸಗಳನ್ನು ದಿನವೂ ಮಾಡಿ. ಫೋನ್ ಬದಲು ಪುಸ್ತಕ ಓದಿ. ನಿಮ್ಮಿಷ್ಟದ ಸ್ಥಳಗಳಿಗೆ ಸುತ್ತಾಡಿ. ಹಾಡು, ಆಟ, ನೃತ್ಯ, ಪೇಂಟಿಂಗ್ ಹೀಗೆ ಹಲವು ಹವ್ಯಾಸಗಳಲ್ಲಿ ಬಿಡುವಿನ ಸಮಯವನ್ನು ಮನರಂಜನಾತ್ಮಕವಾಗಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇಂದು ನಾವೆಲ್ಲರೂ ಕಲುಷಿತ ವಾತಾವರಣದಲ್ಲಿ ಬದುಕುತ್ತಿದ್ದೇವೆ. ಮಾನಸಿಕ ಸ್ಥಿತಿಯಲ್ಲಿ ಏರುಪೇರು ಆಗುತ್ತಿರುವುದನ್ನು ಕಾಣುತ್ತಿದ್ದೇವೆ. ವಿದ್ಯಾರ್ಥಿಗಳು ಜೀವನದಲ್ಲಿ ಯೋಗ, ಪ್ರಾಣಾಯಾಮ ಮಾಡುವುದರ ಮೂಲಕ ಮಾನಸಿಕ ಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಮನುಷ್ಯನ ದೇಹಕ್ಕೆ ಹೇಗೆ ಜ್ವರ ನೆಗಡಿ ಇನ್ನಿತರೆ ಬಾಧೆಗಳು ಕಾಡಿಸುತ್ತವೆ. ಅದೇ ರೀತಿ ಮನುಷ್ಯನ ಮೆದುಳು ಕೂಡ ಅನಾರೋಗ್ಯಕ್ಕೆ ತುತ್ತಾಗುತ್ತದೆ. ಇದನ್ನು ನಿರ್ಲಕ್ಷ್ಯಿಸಿದರೆ ಮುಂದೆ ತೊಂದರೆ ಅನುಭವಿಸಬೇಕಾಗುತ್ತದೆ. ಎಚ್ಚರ ವಹಿಸಿ ಚಿಕಿತ್ಸೆ ಪಡೆದು ಗುಣಪಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಐಕ್ಯೂಸಿ ಸಂಚಾಲಕರಾದ ಡಾ.ರೇಣುಕಾ ಬಿ ಜಾನಬೋ, ಆಪ್ತಸಲಹಾ ಸಮಿತಿ ಸಂಚಾಲಕರಾದ ಆಲಿಸ್​ ಚೆರಿಯನ್​, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಹರ್ಷ ಕುಮಾರ್, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಎನ್​ಎಸ್​ಎಸ್​ ಸಂಯೋಜಕರಾದ ಡಾ. ವಿಜಯ ಕುಮಾರ್​, ಡಾ.ಸಣ್ಣಚಿಕ್ಕಯ್ಯ, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ಗಾಂಧಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಆಯ್ಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eight =
Remember me
