ಬೆಂಗಳೂರು:ಇಲ್ಲೊಬ್ಬ ಯುವಕ ಜನನಿಬಿಡ ಪ್ರದೇಶದಲ್ಲಿ ನಿಂತುಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದಾನೆ. ಇದರಿಂದಾಗಿ ಗಾಬರಿಗೊಂಡ ಸ್ಥಳೀಯರು ಈತನನ್ನು ಉಗ್ರ ಎಂದುಕೊಂಡಿದ್ದಾರೆ. ಭೀತಿಗೊಳಗಾಗಿದ್ದ ಸಾರ್ವಜನಿಕರು ತಕ್ಷಣ ಪೊಲೀಸರನ್ನು ಕರೆದಿದ್ದಾರೆ.
ಈ ಘಟನೆ ಮೈಕೋ ಲೇ ಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಿಟಿಎಂ ಲೇಔಟ್ 2nd ಸ್ಟೇಜ್ 7th ಮೈನ್ ಬಳಿ ನಿನ್ನೆ ಬೆಳಿಗ್ಗೆ ನಡೆದಿದೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಯುವಕನನ್ನು ಅಂಕುಶ್ (24) ಎಂದು ಗುರುತಿಸಲಾಗಿದೆ.
ಮಾಹಿತಿ ಸಿಕ್ಕಿದ್ದೇ ಸ್ಥಳಕ್ಕೆ ಬಂದ ಮೈಕೋ ಲೇಔಟ್ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಠಾಣೆಗೆ ಕರೆದೊಯ್ದು ಆತನನ್ನು ವಿಚಾರಣೆ ಮಾಡಿದಾಗ ಮಾನಸಿಕ ಅಸ್ವಸ್ಥ ಅನ್ನುವುದು ಗೊತ್ತಾಗಿದೆ. ಪೊಲೀಸರು ಮುಂಜಾನೆಯಿಂದ ರಾತ್ರಿವರೆಗೂ ವಿಚಾರಣೆ ಮಾಡಿದ್ದು ನಂತರ ಆತನ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಆಗ ಅವರು ಇತ್ತೀಚೆಗೆ ಮೆಂಟಲಿ ಡಿಸ್ಟರ್ಬ್ ಆಗಿದ್ದ ಅಂದಿದ್ದಾರೆ. ನಂತರ ಆತನ ಬಗ್ಗೆ ಪೂರ್ವಾಪರಿ ವಿಚಾರಿಸಿದ ಪೊಲೀಸರು ಆತನನ್ನು ಬಿಟ್ಟು ಕಳುಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × 2 =
Remember me
