ಚಿಕ್ಕೋಡಿ:ಹಾಡಹಗಲೇ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಈ ಕೊಲೆ ಪ್ರಕರಣ ನಡೆದಿದೆ.
ಕೊಲೆಗೀಡಾದ ವ್ಯಕ್ತಿಯನ್ನು ಪರಶುರಾಮ್ ಹಲಕರ್ಣಿ (32) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮ್ ಗ್ರಾಮದಲ್ಲಿ ಈ ಭೀಕರ ಹತ್ಯೆ ನಡೆದಿದೆ. ಈತ ಹಿಡಕಲ್ ಡ್ಯಾಮ್ ಗ್ರಾಮದಲ್ಲಿ ಕಿರಾಣಿ ಅಂಗಡಿ ವ್ಯಾಪಾರಿಯಾಗಿದ್ದ.
ಇದನ್ನೂ ಓದಿ:ತುಂಡಾದ ವಿದ್ಯುತ್ ತಂತಿ ತುಳಿದು ರೈತರಿಬ್ಬರ ದುರ್ಮರಣ!
ಕೊಲೆಯಾದ ಸ್ಥಳದಲ್ಲಿ ಒಂದು ಕಾರು ಹಾಗೂ ಒಂದು ಬೈಕ್ ಕಂಡುಬಂದಿದೆ. ಶವದ ಪಕ್ಕದಲ್ಲೇ ಇದ್ದ ಕಾರಿನಲ್ಲಿ ಕೊಲೆಗೆ ಬಳಸಿದ್ದ ಲಾಂಗ್ ಮತ್ತು ಮದ್ಯ ಪತ್ತೆಯಾಗಿದೆ. ಕಾರಿನಡಿ ಸಿಲುಕಿದ ಸ್ಥಿತಿಯಲ್ಲಿ ಬೈಕ್ ಕಂಡುಬಂದಿದೆ. ಅಪಘಾತ ಮಾಡಿ ಕೊಲೆ ಮಾಡಿರಬಹುದಾ ಎಂಬ ಶಂಕೆಯೂ ಮೂಡಿದೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

ಇಷ್ಟಪಟ್ಟು ಪುರುಷನ ಜತೆಗಿದ್ದು, ಸಂಬಂಧ ಕೆಟ್ಟಾಗ ರೇಪ್​ ಆಯ್ತು ಅನ್ನೋ ಹಾಗಿಲ್ಲ: ಸುಪ್ರೀಂ ಕೋರ್ಟ್​

ತುಂಡಾದ ವಿದ್ಯುತ್ ತಂತಿ ತುಳಿದು ರೈತರಿಬ್ಬರ ದುರ್ಮರಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 6 =
Remember me
