ಬೆಂಗಳೂರು:ಆರೋಪಿಯ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ ಎಂಬ ಮಾತ್ರಕ್ಕೆ ಆತನಿಗೆ ನೀಡಿರುವ ಜಾಮೀನು ರದ್ದುಪಡಿಸಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಅತ್ಯಾಚಾರ ಪ್ರಕರಣವೊಂದರ ಆರೋಪಿಗೆ ನೀಡಿದ್ದ ಜಾಮೀನು ರದ್ದುಪಡಿಸುವಂತೆ ಕೋರಿ ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಕೋರಮಂಗಲದ 37 ವರ್ಷದ ವ್ಯಕ್ತಿಯ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಆ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಇದರಿಂದ, ಸಂತ್ರಸ್ತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಆರೋಪಿಯ ವಿರುದ್ಧ 11 ಪ್ರಕರಣಗಳು ದಾಖಲಾಗಿದ್ದು, ಹಲವು ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ. ಆತನೊಬ್ಬ ನಿರಂತರ ಅಪರಾಧಗಳನ್ನು ಎಸಗುವ ವ್ಯಕ್ತಿಯಾಗಿದ್ದು (ಹೆಬಿಚುಯಲ್ ಅಫೆಂಡರ್), ಆತನ ಜಾಮಿನು ರದ್ದುಪಡಿಸಬೇಕೆಂದು ಕೋರಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಪೀಠ, ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ನ್ಯಾಯಾಲಯ ವಿಧಿಸಿದ್ದ ಷರತ್ತು ಉಲ್ಲಂಘಿಸಿರುವುದನ್ನು ಸಾಬೀತುಪಡಿಸುವ ಯಾವುದೇ ದಾಖಲೆಗಳು ಲಭ್ಯವಿಲ್ಲದಿರುವಾಗ, ಕೇವಲ ಆರೋಪಿಯ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ ಎಂಬ ಕಾರಣಕ್ಕೆ ಜಾಮೀನು ರದ್ದುಪಡಿಸಲು ಸಾಧ್ಯವಿಲ್ಲ. ಸಂವಿಧಾನದ ಪರಿಚ್ಛೇದ 21ರಲ್ಲಿ ನೀಡಲಾಗಿರುವ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಜೀವಿಸುವ ಹಕ್ಕನ್ನು ನಿರ್ಬಂಧಿಸಲಾಗದು. ಅಪರಾಧ ದಂಡ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 439 (2) ಪ್ರಕಾರ ವಿರಳ ಪ್ರಕರಣಗಳಲ್ಲಿ ಮಾತ್ರ ಜಾಮೀನು ರದ್ದುಕೋರಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿ ಅರ್ಜಿ ವಜಾಗೊಳಿಸಿದೆ.
ಬಾಕಿ ಪ್ರಕರಣಗಳಿದ್ದರೆ ಹೆಬಿಚುಯಲ್ ಅಫೆಂಡರ್ ಅಲ್ಲ:ಆರೋಪಿ ಪರ ವಕೀಲರು, ಮೂರಕ್ಕೂ ಹೆಚ್ಚು ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದರೆ ಮಾತ್ರ ಆ ವ್ಯಕ್ತಿಯನ್ನು ಹೆಬಿಚುಯಲ್ ಅಫೆಂಡರ್ ಎಂದು ಪರಿಗಣಿಸಬಹುದು. ಸಂತ್ರಸ್ತೆಯು ಆರೋಪಿ ವಿರುದ್ಧ ದಾಖಲಾಗಿರುವ ಸಿವಿಲ್ ಪ್ರಕರಣಗಳನ್ನೂ ಸೇರಿಸಿ ಹೆಬಿಚುಯಲ್ ಅೆಂಡರ್ ಎಂದು ಆರೋಪಿಸಿರುವ ಕ್ರಮ ಸರಿಯಲ್ಲ ಎಂದು ವಾದ ಮಂಡಿಸಿದ್ದರು.ಈ ಅಂಶವನ್ನು ಪರಿಗಣಿಸಿದ ಪೀಠ, ಆರೋಪಿಯ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿರುವ ವಿಚಾರ ಸತ್ಯವಾಗಿದ್ದರೂ, ಆ ಎಲ್ಲ ಪ್ರಕರಣಗಳಲ್ಲಿ ಆತ ನಿರೀಕ್ಷಣಾ ಜಾಮೀನು ಪಡೆದಿದ್ದಾನೆ. ಜತೆಗೆ, ಯಾವ ಪ್ರಕರಣಗಳಲ್ಲೂ ಆತನಿಗಿನ್ನೂ ಶಿಕ್ಷೆಯಾಗಿಲ್ಲ. ಆತನ ವಿರುದ್ಧ ಇರುವ ಇತರ ಪ್ರಕರಣಗಳ ವಿಚಾರನ್ನು ಪ್ರಸ್ತುತ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ವೇಳೆ ಕೋರ್ಟ್ ಗಮನಕ್ಕೆ ತರಲು ಪ್ರಾಸಿಕ್ಯೂಷನ್ ವಿಲವಾಗಿದೆ. ಈ ಕಾರಣದಿಂದ, ಮೆರಿಟ್ ಮೇಲೆ ಆರೋಪಿಯ ಅರ್ಜಿ ಪರಿಗಣಿಸಿ ನೀಡಿರುವ ಜಾಮೀನು ರದ್ದುಗೊಳಿಸಲು ಸಾಧ್ಯವಿಲ್ಲ. ಆರೋಪಿಯ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿರುವ ಮಾತ್ರಕ್ಕೆ ಆತನನ್ನು ಹೆಬಿಚುಯಲ್ ಅಫೆಂಡರ್ ಎಂದು ಪರಿಗಣಿಸಲಾಗದು ಎಂದು ಹೈಕೋರ್ಟ್ ಹೇಳಿದೆ.
ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ:ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾಗಿದ್ದ ವ್ಯಕ್ತಿ ತಾನೊಬ್ಬ ಯಶಸ್ವಿ ಉದ್ಯಮಿಯಾಗಿದ್ದು, ದೇಶ ವಿದೇಶಗಳಲ್ಲಿ ತನ್ನ ಉದ್ದಿಮೆ ಇರುವುದಾಗಿ ಹೇಳಿಕೊಂಡಿದ್ದ. ನಮ್ಮಿಬ್ಬರ ಪರಿಚಯ ಸ್ನೇಹಕ್ಕೆ ತಿರುಗಿತ್ತು. ಈ ಮಧ್ಯೆ ವಿವಾಹದ ಪ್ರಸ್ತಾಪ ಮಾಡಿದ್ದ. ಬಳಿಕ ಹಲವು ಬಾರಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದ. ನನ್ನನ್ನೇ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಎಲ್ಲರ ಮುಂದೆ ನಾವಿಬ್ಬರೂ ಮದುವೆಯಾಗಿರುವುದಾಗಿ ಹೇಳಿಕೊಳ್ಳುವಂತೆ ತಿಳಿಸಿದ್ದ. ಆತನ ಹಿನ್ನೆಲೆ ಪರಿಶೀಲಿಸಿದಾಗ, 10 ವರ್ಷಗಳ ಹಿಂದೆಯೇ ಮದುವೆಯಾಗಿದ್ದು, ಒಂದು ಮಗು ಇರುವ ವಿಚಾರವೂ ಬೆಳಕಿಗೆ ಬಂದಿತ್ತು. ಇದೆಲ್ಲದರ ಮಧ್ಯೆ ಹಲವು ಕಾರಣಗಳನ್ನು ನೀಡಿ ಹಂತ ಹಂತವಾಗಿ 31,88,500 ರೂ. ಹಾಗೂ 6 ಲಕ್ಷ ಮೌಲ್ಯದ ಆಭರಣ ಪಡೆದುಕೊಂಡು ವಂಚಿಸಿದ್ದಾನೆ ಎಂದು ಆರೋಪಿಸಿ ಮಹಿಳೆ ವಿವೇಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಆ ವ್ಯಕ್ತಿಯ ವಿರುದ್ಧ ಅತ್ಯಾಚಾರ, ವಂಚನೆ ಹಾಗೂ ಜೀವಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + eleven =
Remember me
