ಬೆಂಗಳೂರು:ಡಿಸಿಸಿ-ಅಪೆಕ್ಸ್ ಬ್ಯಾಂಕ್ ವಿಲೀನದ ಬಗ್ಗೆ ಅಧಿಕಾರಿಗಳು ಕೇರಳ ಮತ್ತು ಜಾರ್ಖಂಡ್​ಗೆ ಅಧ್ಯಯನ ಪ್ರವಾಸಕ್ಕೆ ನಡೆಸಲಿದ್ದು, ಅಲ್ಲಿನ ಸಾಧಕ-ಬಾಧಕಗಳನ್ನು ನೋಡಿ ತೀರ್ಮಾನ ತೆಗೆದುಕೊಳ್ಳುವುದಾಗಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಕೇರಳ ಮತ್ತು ಜಾರ್ಖಂಡ್ ಪ್ರವಾಸದ ಬಳಿಕ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ಈ ವರದಿ ಪರಿಶೀಲಿಸಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಡಿಸಿಸಿ ಬ್ಯಾಂಕ್​ಗಳನ್ನು ಅಪೆಕ್ಸ್ ಬ್ಯಾಂಕ್​ನೊಂದಿಗೆ ವಿಲೀನ ಮಾಡುವ ವಿಚಾರದ ಬಗ್ಗೆ ಈಗಾಗಲೆ ಒಂದು ಸುತ್ತಿನ ಸಭೆ ಮಾಡಿದ್ದೇವೆ. ಜಾರ್ಖಂಡ್ ಮತ್ತು ಕೇರಳದಲ್ಲಿ ಈ ಮಾದರಿ ಚಾಲನೆಯಲ್ಲಿದೆ. ಈ ರೀತಿಯ ವಿಲೀನ ಪ್ರಕ್ರಿಯೆಯಿಂದ ರೈತರಿಗೆ ಬಡ್ಡಿ ಉಳಿತಾಯವಾಗುತ್ತದೆ. ಕರ್ನಾಟಕದಲ್ಲಿ ಕೂಡ ಅದೇ ರೀತಿ ವಿಲೀನ ಮಾಡುವ ಚಿಂತನೆ ಇದೆ. ಕೋವಿಡ್​ನಿಂದ ಮೃತಪಟ್ಟ ರೈತರ ಸಾಲ ಮನ್ನಾ ಮಾಡಲು ಡಿಸಿಸಿ ಬ್ಯಾಂಕ್​ಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಏಕರೂಪದ ಸಾಫ್ಟ್​ವೇರ್ ಅಭಿವೃದ್ಧಿ:ರಾಜ್ಯದಲ್ಲಿ 5400 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿದ್ದು, ಅವುಗಳ ನಿರ್ವಹಣೆಗೆ ಏಕರೂಪದ ಸಾಫ್ಟ್​ವೇರ್ ಅಭಿವೃದ್ಧಿಪಡಿಸಲಾಗುತ್ತದೆ. ಅದಕ್ಕಾಗಿ ಬಜೆಟ್​ನಲ್ಲಿ 256 ಕೋಟಿ ರೂ. ಮೀಸಲಿರಿಸಲಾಗಿದೆ. ಈ ಪೈಕಿ ಶೇ. 60 ಕೇಂದ್ರ, ಶೇ.40 ಹಣವನ್ನು ರಾಜ್ಯ ಸರ್ಕಾರ ಭರಿಸಲಿದೆ. ಮಂಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಅವರಿಗೆ ಈ ಸಾಫ್ಟ್​ವೇರ್ ಅಭಿವೃದ್ಧಿ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದರು.
ಕ್ಷೀರ ಸಮೃದ್ಧಿ ಬ್ಯಾಂಕ್ ಸಮರ್ಥನೆ:ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಸಮರ್ಥಿಸಿಕೊಂಡ ಸಚಿವರು, ಹಾಲು ಉತ್ಪಾದಕರಿಗೆ ಇದರಿಂದ ಅನುಕೂಲವಾಗಲಿದೆ ಎಂದರು.
20,810 ಕೋಟಿ ರೂ. ಸಾಲ:ರಾಜ್ಯದ 30.86 ಲಕ್ಷ ರೈತರಿಗೆ 20, 810 ಕೋಟಿ ರೂ. ಸಾಲ ವಿತರಿಸುವ ಪ್ರಕ್ರಿಯೆ ನಡೆದಿದೆ. ಈಗಾಗಲೆ 16, 000 ಕೋಟಿ ರೂ.ಗೂ ಹೆಚ್ಚು ಸಾಲ ವಿತರಿಸಲಾಗಿದೆ. ಎರಡನೇ ಕಂತಿನ ಹಣ ಬೆಂಗಳೂರು ಡಿಸಿಸಿ ಬ್ಯಾಂಕ್ ಮೂಲಕ ಸಾಂಕೇತಿಕವಾಗಿ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಾಲನೆ ನೀಡುತ್ತೇವೆ ಎಂದು ಸೋಮಶೇಖರ್ ವಿವರಿಸಿದರು.
ನಾಳೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ:ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಮಾ.20 ರ ಬೆಳಗ್ಗೆ 11ಕ್ಕೆ ಬೆಂಗಳೂರಿನ ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಸಮಾರಂಭ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − five =
Remember me
