ಬೆಂಗಳೂರು:ಮಹಾರಾಷ್ಟ್ರದಲ್ಲಿ ಛತ್ರಪತಿ ಶಿವಾಜಿ ಅವರನ್ನು ಆ ರಾಜ್ಯದ ಸಾಂಸ್ಕೃತಿಕ ಪ್ರತೀಕ ಎಂದು ಪರಿಗಣಿಸಿರುವ ರೀತಿಯಲ್ಲೇ ನಮ್ಮ ರಾಜ್ಯದಲ್ಲಿ ಬಸವೇಶ್ವರ ಅವರನ್ನು ಸಾಂಸ್ಕೃತಿಕ ಪ್ರತೀಕವಾಗಿ ಪರಿಗಣಿಸಬೇಕು ಎಂಬ ಬೇಡಿಕೆಗಳು ಇವೆ ಎಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರುಕರ್ನಾಟಕದ ಹೆಸರನ್ನು ಬಸವೇಶ್ವರ ನಾಡು ಎಂದು ಬದಲಾಯಿಸುವ ಪ್ರಸ್ತಾವ ಇದೆಯೇ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಂತಹ ಪ್ರಸ್ತಾಪದ ಬಗ್ಗೆ ನನಗೆ ಯಾವ ಮಾಹಿತಿಯೂ ಇಲ್ಲ ಎಂದರು.ಅಂತೆಯೇ, ಬಿಜಾಪುರ ಹೋಗಿ ವಿಜಯಪುರ ಆಗಿರುವ ಜಿಲ್ಲೆಗೆ ಬಸವೇಶ್ವರ ಜಿಲ್ಲೆ ಎಂದು ನಾಮಕರಣ ಮಾಡಬೇಕೆಂಬ ಧ್ವನಿಯೂ ಕೇಳಿಬಂದಿದೆ. ಯಾವುದಕ್ಕೇ ಆಗಲಿ ಬಸವೇಶ್ವರರ ಹೆಸರನ್ನು ಇಡುವುದಕ್ಕೆ ನಮ್ಮ ಯಾರ ವಿರೋಧವೂ ಇಲ್ಲ. ವೈಯಕ್ತಿಕವಾಗಿ ನಾನಂತೂ ಬಸವಣ್ಣನವರ ಅಪ್ಪಟ ಅನುಯಾಯಿ. ಆದರೆ, ಹೆಸರು ಬದಲಾವಣೆ ಮಾಡುವುದಕ್ಕೆ ಮುಂಚೆ ಇತರ ಹತ್ತು ಹಲವು ಸಾಧಕ ಬಾಧಕಗಳ ಬಗ್ಗೆ ಆಲೋಚಿಸಬೇಕಾಗುತ್ತದೆ ಎಂದು ವಿವರಿಸಿದರು.ಒಂದು ಹೆಸರನ್ನು ಬದಲಾಯಿಸಿದರೆ ಅದು ಸ್ಥಳೀಯ ಮಟ್ಟದಿಂದ ಹಿಡಿದು ಅಂತರರಾಷ್ಟ್ರೀಯ ಮಟ್ಟದವರೆಗೆ ಬದಲಾವಣೆ ಆಗಬೇಕಾಗುತ್ತದೆ. ಹೀಗಾದಾಗ ಕೆಲವು ತೊಡಕುಗಳು ಕೂಡ ಉಂಟಾಗುತ್ತವೆ. ಬಿಜಾಪುರ ಹೆಸರನ್ನು ವಿಜಯಪುರ ಎಂದು ಬದಲಾಯಿಸಿದಾಗ ಕೂಡ ಸಾಕಷ್ಟು ಅಡಚಣೆಗಳು ಎದುರಾಗಿದ್ದವು. ಈಗಷ್ಟೇ ಅವೆಲ್ಲಾ ಒಂದು ಹಂತಕ್ಕೆ ಬಂದಿವೆ. ಅಲ್ಪಾವಧಿಯಲ್ಲಿ ಒಂದು ಸ್ಥಳದ ಹೆಸರನ್ನು ಎರಡನೇ ಸಲ ಬದಲಾಯಿಸುವ ಬಗ್ಗೆ ಸಾಕಷ್ಟು ಚರ್ಚೆ ನಡೆಸಬೇಕಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.ಬಸವೇಶ್ವರರ ಹೆಸರನ್ನು ’ನಮ್ಮ ಮೆಟ್ರೊ’ಗೆ ಇಡುವ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದರು.ಮೆಟ್ರೊಗೆ ಬಸವೇಶ್ವರರ ಹೆಸರು ಇಡಬೇಕು ಎನ್ನುವ ಬೇಡಿಕೆ ಇದೆ. ಕೇವಲ ಯಾವುದೊ ಒಂದು ನಿಲ್ದಾಣಕ್ಕೆ ಹೆಸರು ಇಡುವ ಬದಲು ಇಡೀ ಮೆಟ್ರೊ ವ್ಯವಸ್ಥೆ ಗೇ ಬಸವೇಶ್ವರರ ಹೆಸರು ಇಡುವುದು ಸೂಕ್ತ. ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಟ್ಟ ಹಾಗೆ ಮೆಟ್ರೊಗೊ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಅಂತಿಮ ಮಾಡಲಾಗುವುದು ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
