ಬೆಂಗಳೂರು:ನಾಗವಾರ ಬಳಿ ರಸ್ತೆ ಮೇಲೆ ‘ನಮ್ಮ ಮೆಟ್ರೋ’ ಪಿಲ್ಲರ್​ ಕುಸಿದು ದುರ್ಘಟನೆಯಲ್ಲಿ ತಾಯಿ-ಮಗು ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಭೇಟಿ ನೀಡಿದ ಬಿಎಂಆರ್​ಸಿಎಲ್ ಎಂಡಿ ಅಜುಂ ಪರ್ವೇಜ್, ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಮೃತ ಕುಟುಂಬಕ್ಕೆ ಪರಿಹಾರ ಎಷ್ಟು ಕೊಟ್ರೂ ಸಾಕಾಗಲ್ಲ. ಎರಡು ಅಮಾಯಕ ಜೀವಗಳು ಬಲಿಯಾಗಿದ್ದು ದುರಂತ. ನಮ್ಮ ಇಂಜಿನಿಯರ್ ಜತೆ ಮಾತಾಡಿದ್ದೇವೆ. IISC ಅನಾಲಿಸಿಸ್ ಮಾಡುತ್ತದೆ. ಕಂಟ್ರ್ಯಾಕ್ಟರ್​ಗೆ ನೋಟಿಸ್ ನೀಡಲಾಗಿದೆ. 18ರಿಂದ 20 ಮೀಟರ್ ಉದ್ದದ ಪಿಲ್ಲರ್​ನಿಂದ ಅಪಘಾತ ಆಗಿದೆ. ಎರಡ್ಮೂರು ದಿನ ಇಲ್ಲಿ ಕೆಲಸ ಮಾಡೋದಿಲ್ಲ. ಮಾನ್ಯುಯಲ್​ ಮಿಸ್ಟೇಕ್ ಯಾರ ಕಡೆಯಿುದ ಆಗಿದೆ ಎಂದು IISC ವರದಿ ಬಂದ ನಂತರ ಗೊತ್ತಾಗುತ್ತೆ. ತಾಂತ್ರಿಕ ವಿಚಾರಗಳನ್ನೂ ಪರಿಗಣಿಸಲಾಗುತ್ತೆ ಎಂದರು.
ಇನ್ನು ಮೆಟ್ರೋ ಪಿಲ್ಲರ್​ ಕುಸಿದು ಇಬ್ಬರು ಮೃತಪಟ್ಟ ಹಿನ್ನೆಲೆ ನಿರ್ಲಕ್ಷ್ಯದ ಆರೋಪದಡಿ BMRCL ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಗೋವಿಂದಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗದಗ ಮೂಲದ ಲೋಹಿತ್​ ಕುಮಾರ್​ ಮತ್ತು ತೇಜಸ್ವಿನಿ ದಂಪತಿ ಇಬ್ಬರೂ ಬೆಂಗಳೂರಿನಲ್ಲಿ 10 ವರ್ಷಗಳಿಂದ ವಾಸವಿದ್ದರು. ಇಬ್ಬರೂ ಸಿವಿಲ್ ಇಂಜಿನಿಯರ್​ ಆಗಿದ್ದರು. ಮಕ್ಕಳಿಬ್ಬರನ್ನೂ ಬೇಬಿ ಸಿಟ್ಟಿಂಗ್​ಗೆ ಬಿಟ್ಟು, ಪತ್ನಿಯನ್ನ ಕಂಪನಿ ಬಳಿ ಡ್ರಾಪ್​ ಮಾಡಿ ಬಳಿ ತಾನೂ ಕೆಲಸಕ್ಕೆ ಹೋಗಲೆಂದು ಪತ್ನಿ-ಮಕ್ಕಳನ್ನು ಬೈಕ್​ನಲ್ಲಿ ಲೋಹಿತ್ ಕರೆದುಕೊಂಡು ಇಂದು(ಮಂಗಳವಾರ) ಬೆಳಗ್ಗೆ ಹೋಗುತ್ತಿದ್ದರು. ದುರಾದೃಷ್ಟವಶಾತ್​ ಚಲಿಸುತ್ತಿದ್ದ ಬೈಕ್​ ಮೇಲೆ 10.30ರ ಸುಮಾರಿಗೆ ಮೆಟ್ರೋ ಪಿಲ್ಲರ್​ ಕುಸಿದಿದ್ದು, ನಾಲ್ವರೂ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಇವರನ್ನ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗ ಮೃತಪಟ್ಟಿದ್ದಾರೆ. ಲೋಹಿತ್​ ಮತ್ತು ಮಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಅತ್ತ ತಾಯಿ-ಮಗು ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಿರ್ಲಕ್ಷ್ಯಕ್ಕೆ ಅಮಾಯಕರು ಬಲಿಯಾಗಿದ್ದಾರೆ ಎಂದು ಮೆಟ್ರೋ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಸಾಹಿತಿ ಸಾರಾ ಅಬೂಬಕ್ಕರ್ ನಿಧನ: ಕಳಚಿತು ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿ

ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಕನಕಪುರದಲ್ಲಿ ಶಾಲಾ ಬಸ್​ಗೆ ಬಾಲಕಿ ಬಲಿ! ತರಗತಿ ಮುಗೀತು ಮನೆಗೆ ಹೋಗಿ ಅಮ್ಮನ ಮಡಿಲು ಸೇರಬೇಕು ಅನ್ನುವಷ್ಟರಲ್ಲಿ ಘೋರ ದುರಂತ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + nineteen =
Remember me
