ಬೆಂಗಳೂರು:ಮಂಗಳವಾರ ಬೆಳಗಿನ ಜಾವ ನಮ್ಮ ಮೆಟ್ರೋ ರೀ ರೈಲು ಹಳಿ ತಪ್ಪಿದ ಪರಿಣಾಮ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಸಂಭವಿಸಿದೆ.
ಈ ಕುರಿತು ಬಿಎಂಆರ್​ಸಿಎಲ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ತಿಳಿಸಿದೆ. ನಾಗಸಂದ್ರದಿಂದ ರೇಷ್ಮೆ ಸಂಸ್ಥೆವರೆಗಿನ ಹಳಿಯಲ್ಲಿ ಸಂಚಾರಕ್ಕೆ ತೊಂದರೆಯಾಗಿದ್ದು, ಯಶವಂತಪುರದಿಂದ ಮಂತ್ರಿ ಮಾಲ್​ವರೆಗೆ ರೈಲುಗಳು ಏಕಮುಖವಾಗಿ ಮಾತ್ರ ಸಂಚರಿಸುತ್ತಿವೆ.
ನಮ್ಮ ಮೆಟ್ರೋ ಪ್ರಯಾಣಿಕರು ದಯವಿಟ್ಟು ಗಮನಿಸಿ, ರಾಜಾಜಿನಗರ ಮೆಟ್ರೊ ನಿಲ್ದಾಣದಲ್ಲಿ ತಾಂತ್ರಿಕ ಅಡಚಣೆಯಿಂದಾಗಿ ನಾಗಸಂದ್ರದಿಂದ ಯಶವಂತಪುರ ಮತ್ತು ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯಿಂದ ರೇಷ್ಮೆ ಸಂಸ್ಥೆ ಮೆಟ್ರೊ ನಿಲ್ದಾಣದ ನಡುವೆ ಮಾತ್ರ ಹಸಿರು ಮಾರ್ಗದಲ್ಲಿ ರೈಲು ಸೇವೆಗಳು ಲಭ್ಯವಿರುತ್ತವೆ. ಅಡಚಣೆಗಾಗಿ ವಿಷಾದಿಸುತ್ತೇವೆ.
ಇದನ್ನೂ ಓದಿ:ಸನಾತನ ಧರ್ಮ ಹೊರತುಪಡಿಸಿದರೆ ಉಳಿದೆಲ್ಲವೂ…: ಯೋಗಿ ಆದಿತ್ಯನಾಥ್
ರೀ ರೈಲ್ ವಾಹನವನ್ನು‌ ಹಳಿಗೆ ತರಲು ಮೆಟ್ರೋ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇಂದು ಮಧ್ಯಾಹ್ನದವರೆಗೂ ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ರೀ ರೈಲ್ ತೆರವು ಆಗುವವರೆಗೆ ಏಕಮುಖ ಸಂಚಾರ ಇರಲಿದೆ ಎಂದು  ಬಿಎಂಆರ್‌ಸಿಎಲ್‌ ಉನ್ನತ ಮೂಲಗಳು ತಿಳಿಸಿವೆ.
ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಸರಿಪಡಿಸಲು ಬಳಸುವ ರೀ ರೈಲ್ ರಾಜಾಜಿನಗರ ನಿಲ್ದಾಣದ ತಿರುವಿನಲ್ಲಿ ಹಳಿ ತಪ್ಪಿದ ಪರಿಣಾಮ ಈ ಸಮಸ್ಯೆ ಎದುರಾಗಿದೆ.
In addition to earlier tweet regarding metro train operations in Green line , single line operations are being done between Yeshwanthpur to Mantri Square Sampige road metro stations to reduce the inconvenience to metro passengers. FKI
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 2 =
Remember me
