
ಮಂಗಳೂರು:ಇಲ್ಲಿನ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಶುಕ್ರವಾರ ಬೆಳ್ಳಂಬೆಳಗ್ಗೆ ಏಕಾಏಕಿ ಜಮಾಯಿಸಿದ ಸಾವಿರಾರು ಕಾರ್ಮಿಕರು ಪೊಲೀಸರಿಗೂ ತಲೆಬಿಸಿ ತಂದೊಡ್ಡಿದ್ದರು. ‘We want to go home’ ಎಂಬ ಪೋಸ್ಟರ್ ಹಿಡಿದು ಸಾಮಾಜಿಕ ಅಂತರವಿಲ್ಲದೆ ಕುಳಿತ್ತಿದ್ದ ಕಾರ್ಮಿಕರನ್ನು ಜಾಗದಿಂದ ಕದಲಿಸಲು ಹರಸಾಹಸ ಪಟ್ಟರು. ಅಲ್ಲದೆ ಸುಮಾರು 5 ಸಾವಿರ ಕಾರ್ಮಿಕರು ರೈಲ್ವೆ ನಿಲ್ದಾಣದತ್ತ ಬರುತ್ತಿದ್ದದ್ದು, ಮತ್ತಷ್ಟು ಆತಂಕ ಸೃಷ್ಟಿಸಿತ್ತು. ಹೀಗೆ ಸಾವಿರಾರು ಕಾರ್ಮಿಕರು ಒಮ್ಮೆಲೆ ನಿಲ್ದಾಣಕ್ಕೆ ಬರಲು ಕಾರಣ ಏನು ಗೊತ್ತಾ?
“ಉತ್ತರ ಭಾರತ ಪ್ರದೇಶಗಳಿಗೆ ಹೋಗುವ ಪ್ರಯಾಣಿಕರಿಗೆ ರೈಲುಗಳ ವ್ಯವಸ್ಥೆ ಮಾಡಲಾಗಿದೆ. ಇಂದಿನಿಂದಲೇ ಸಂಚರಿಸುತ್ತಿವೆ” ಎಂದು ಯಾರೋ ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದು, ಈ ಸುಳ್ಳುಸುದ್ದಿ ಕಾಡ್ಗಿಚ್ಚಿನಂತೆ ಹರಡಿ ಸಾವಿರಾರು ವಲಸೆ ಕಾರ್ಮಿಕರು ತಮ್ಮೂರಿಗೆ ಹೋಗುವ ಧಾವಂತದಲ್ಲಿ ನಿಲ್ದಾಣಕ್ಕೆ ಬರುತ್ತಿದ್ದರು. ಇದು ಸುಳ್ಳು ವದಂತಿ, ರೈಲಿನ ವ್ಯವಸ್ಥೆ ಮಾಡಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದರೂ ಕಿವಿಗೊಡದ ಕಾರ್ಮಿಕರು ಊರಿಗೆ ಕಳುಹಿಸಿಕೊಡಿ ಎಂದು ಪಟ್ಟುಹಿಡಿದು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.
ಇದನ್ನೂ ಓದಿರಿಗಂಡನ ಕೊಂದಳು, ಸಾವಿಗೆ ಕೋವಿಡ್​ ಕಾರಣ ಎಂದಳು…!
ನಿಲ್ದಾಣದಿಂದ ಹೋಗುವಂತೆ ಪೊಲೀಸರರು ಕಾರ್ಮಿಕರ ಮನವೊಲಿಕೆಗೆ ಯತ್ನಿಸಿದರಾದರೂ ಕ್ಯಾರೆ ಎನ್ನದೆ ಅಲ್ಲೇ ಕುಳಿತ್ತಿದ್ದರು. ಉಪವಾಸವಿದ್ದರೂ ಪರವಾಗಿಲ್ಲ, ಜಾಗ ಬಿಟ್ಟು ಹೋಗುವುದಿಲ್ಲ ಎಂದು ಪ್ರತಿಭಟನೆ ಶುರು ಮಾಡಿಕೊಂಡಿದ್ದರು. ಪ್ರತಿಭಟನಾ ಸ್ಥಳಕ್ಕೆ ಬಂದ ಮಂಗಳೂರು ಎಸಿ ಮದನ್ ಮೋಹನ್, ಶೀಘ್ರವೇ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಇದಕ್ಕೂ ಬಗ್ಗಲಿಲ್ಲ. ನಿಮ್ಮ ನಿಮ್ಮ ರಾಜ್ಯಗಳ ಸರ್ಕಾರದ ಜತೆ ಮಾತನಾಡಿ ಮೂರು ದಿನದೊಳಗೆ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದಾಗ ಒಪ್ಪಿದ ಕಾರ್ಮಿಕರು ತಮ್ಮ ತಮ್ಮ ಕೆಲಸದ ಸ್ಥಳಗಳಿಗೆ ಹೊರಟರು. ಪ್ರತಿಭಟನಾ ಸ್ಥಳದಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಡಾ.ಪಿ‌.ಎಸ್ ಹರ್ಷ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ರೈಲ್ವೆ ಪೊಲೀಸರೂ ನಿಲ್ದಾಣದಲ್ಲಿ ಭದ್ರತೆ ಕೈಗೊಂಡಿದ್ದಾರೆ.
ಇದನ್ನೂ ಓದಿರಿಹಳಿಗಳ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹರಿದ ಗೂಡ್ಸ್​ ರೈಲು: 15 ಮಂದಿ ದುರ್ಮರಣ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 3 =
Remember me
