ಬೆಂಗಳೂರು:ಕೃಷಿ ಇಲಾಖೆ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಲಾಗಿರುವ 3 ದಿನಗಳ ಸಾವಯವ, ಸಿರಿಧಾನ್ಯ ಅಂತಾರಾಷ್ಟ್ರೀಯ ವಾಣಿಜ್ಯ ಮೇಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ, ಸಿರಿಧಾನ್ಯಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಬೇಕೆಂಬ ಆಶಯದೊಂದಿಗೆ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳವನ್ನು ಆಯೋಜಿಸಲಾಗಿದೆ ಎಂದರು.
ಇದನ್ನೂ ಓದಿ:ಇರಾನ್ ಜನರಲ್ ಸುಲೇಮಾನಿ ಸ್ಮರಣೆ ವೇಳೆ ಸ್ಫೋಟ; ದಾಳಿಯ ಹೊಣೆ ಹೊತ್ತ ಐಸಿಸ್
ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಂಗನವಾಡಿ, ಶಾಲೆಗಳಲ್ಲಿ, ಆಸ್ಪತ್ರೆ, ಇಂದಿರಾ ಕ್ಯಾಂಟಿನ್​ಗಳಲ್ಲಿಯೂ ಸಿರಿಧಾನ್ಯದ ಆಹಾರ ನೀಡಲು ಅವಕಾಶಗಳಿದ್ದು ಆರೋಗ್ಯಕ್ಕೆ ಉತ್ತಮವಾಗಿರುವುದರಿಂದ ಈ‌ ಬಗ್ಗೆ ಶೀಘ್ರ ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದು ನಿರ್ಧರಿಸಲಾಗುವುದು ಎಂದರು.
ರಾಜ್ಯ ಸರ್ಕಾರ ಕೃಷಿಯ ಶ್ರೇಯೋಭಿವೃದ್ದಿಗೆ ಹತ್ತಾರು ಸಂಶೋಧನೆಗೆ, ಯೋಜನೆಗಳ ಮೂಲಕ ನೆರವಾಗುತ್ತಿದೆ. ಸಾವಯವ ಸಿರಿಧಾನ್ಯ ಅಂತಾರಾಷ್ಟ್ರೀಯ ಮೇಳದ ಆಯೋಜನೆಯ ಆಶಯ ಕೂಡ ಇದರ ಭಾಗವಾಗಿದೆ. ರಾಜ್ಯ ಸರ್ಕಾರ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 5 ಲಕ್ಷ ರೂ ವರೆಗೆ ಸಾಲ ನೀಡುತ್ತಿದೆ. 5 ವರ್ಷಗಳಿಂದ ಸ್ಥಗಿತಗೊಂಡಿದ್ದ ಕೃಷಿಭಾಗ್ಯ ಯೋಜನೆಗೆ ಮರು ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ಬರಗಾಲದಲ್ಲಿ ವರವಾದ ಶಾಶ್ವತ ನೀರಾವರಿ
ನವೋದ್ಯಮ ಪ್ರೋತ್ಸಾಹಕ್ಕೆ 10 ಕೋಟಿ ರೂ. ಮೀಸಲಿರಿಸಲಾಗಿದೆ. 50 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಚಾಲನೆ ನೀಡಲಾಗಿದೆ.‌ ಅದೇ ರೀತಿ ಸಿರಿಧಾನ್ಯಕ್ಕೆ ಪ್ರತಿ ಹೆಕ್ಟೇರಿಗೆ 10 ಸಾವಿರ ರೂ ಮೀಸಲಿರಿಸಿದ್ದು, ಪ್ರತಿವರ್ಷ ಪ್ರೋತ್ಸಾಹ ಧನದ ರೂಪದಲ್ಲಿ 25 ಕೋಟಿ‌ ರೂ. ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.
ದಾವೂದ್ ಇಬ್ರಾಹಿಂ ಕುಟುಂಬಕ್ಕೆ ಸೇರಿದ ಎರಡು ಆಸ್ತಿ ಹರಾಜು! ಎಷ್ಟು ಕೋಟಿ ರೂ.ಗೆ ಮಾರಾಟವಾಯ್ತು? ಇಲ್ಲಿದೆ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
