
ಬೆಂಗಳೂರು:ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವಿಫಲಾಗಿರುವ ನರ್ಸಿಂಗ್ ಕಾಲೇಜುಗಳಿಗೆ ಬೀಗ ಹಾಕುವಂತೆ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಗುರುವಾರ ವಿಕಾಸಸೌಧದಲ್ಲಿ ನಡೆದ ನರ್ಸಿಂಗ್ ಕಾಲೇಜುಗಳ ಪದಾಧಿಕಾರಿಗಳ ಸಭೆಯಲ್ಲಿಸರಕಾರದಿಂದ ಎಲ್ಲಾ ಸವಲತ್ತುಗಳನ್ನು ಪಡೆದುಕೊಂಡು ಮೂಲ ಸೌಕರ್ಯ ಒದಗಿಸದೆ ಇದ್ದರೆ ಸಹಿಸಿಕೊಳ್ಳಲು ಹೇಗೆ ಸಾಧ್ಯ? ಆದ್ದರಿಂದ ಕೂಡಲೆ ಈ ಬಗ್ಗೆ ತಪಾಸಣೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ನಿದೇರ್ಶಕಿ ಡಾ.ಸುಜಾತ ರಾಥೋಡ್ ಅವರಿಗೆ ನಿದೇರ್ಶನ ನೀಡಿದರು.ಖಾಸಗಿ ಕಾಲೇಜು ಆಡಳಿತ ಮಂಡಳಿಯವರು ತಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳಬಹುದು ಎಂಬ ಕಾರಣಕ್ಕಾಗಿ ಸರ್ಕಾರ ಕೂಡ ಮಾನವೀಯ ದೃಷ್ಟಿಯಿಂದ ನಡೆದುಕೊಂಡಿದೆ. ಇಷ್ಟಾದರೂ ಬುದ್ದಿ ಬಂದಿಲ್ಲ ಅಂದರೆ ಹೇಗೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೆಲ ಕಾಲೇಜುಗಳನ್ನು ಹೊರತುಪಡಿಸಿದರೆ ಹೆಚ್ಚಿನ ಪ್ರಮಾಣದಲ್ಲಿ ಬೋಧಕ, ಬೋಧಕೇತರ, ಪ್ರಯೋಗಾಲಯ, ಸಿಬ್ಬಂದಿ, ಗ್ರಂಥಾಲಯ, ಶುಚಿತ್ವ, ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿವೆ. ಇಷ್ಟು ಸಮಸ್ಯೆಗಳನ್ನು ಇಟ್ಟುಕೊಂಡು ವಿದ್ಯಾರ್ಥಿಗಳಿಗೆ ಯಾವ ಶಿಕ್ಷಣ ಕೊಡುತ್ತಾರೆ ಎಂದು ಸಚಿವರು ತರಾಟೆಗೆ ತೆಗೆದುಕೊಂಡರು.ವಿದ್ಯಾರ್ಥಿಗಳನ್ನು ಪ್ರವೇಶ ಮಾಡಿಕೊಳ್ಳುವ ವೇಳೆ ಆಶ್ವಾಸನೆಗಳನ್ನು ನೀಡಿ ಅವರಿಂದ ಹೆಚ್ಚಿನ ಶುಲ್ಕ ಪಡೆಯುತ್ತೀರಿ. ಕನಿಷ್ಠ ಪಕ್ಷ ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿಕೊಡದಿದ್ದರೆ, ಹೇಗೆ?ಇನ್ನು ಮುಂದೆ ಪ್ರತಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ಪ್ರವೇಶ ಮಾಡಿಕೊಳ್ಳುವ ಮುನ್ನ ಅಧಿಕಾರಿಗಳು ಪ್ರತಿಯೊಂದು ಕಾಲೇಜುಗೆ ಭೇಟಿ ನೀಡಬೇಕು. ಯಾವ ಕಾಲೇಜು ಸರ್ಕಾರದ ಮಾನದಂಡ ಪಾಲನೆ ಮಾಡುವುದಿಲ್ಲವೂ ಅವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.
ಪರಿಷ್ಕರಣೆ ಇಲ್ಲ:ನರ್ಸಿಂಗ್ ಕಾಲೇಜು ಆಡಳಿತ ಮಂಡಳಿಯ ವತಿಯಿಂದ ಶುಲ್ಕ ಪರಿಷ್ಟರಣೆ ಮಾಡಬೇಕು ಎಂಬ ಬೇಡಿಕೆಯನ್ನು ತಳ್ಳಿ ಹಾಕಿದ ಸಚಿವರು. ಯಾವುದೇ ಕಾರಣಕ್ಕೂ ವಾರ್ಷಿಕ ಶುಲ್ಕವನ್ನು ಪರಿಷ್ಕರಣೆ ಮಾಡುವುದಿಲ್ಲ ಎಂದರು.
ಸೀಟುಗಳನ್ನು ಬಿಡಲು ಸಲಹೆ:ಸರ್ಕಾರಿ ಕೋಟಾದ ನರ್ಸಿಂಗ್ ಸೀಟುಗಳ ಪ್ರಮಾಣವನ್ನು ಶೇ.40 ರಷ್ಟು ಬಿಟ್ಟುಕೊಡಿ ಎಂದು ಆಡಳಿತ ಮಂಡಳಿಯವರಿಗೆ ಸಚಿವರು ಸಲಹೆ ನೀಡಿದರು. ಪ್ರಸ್ತುತ 611 ನರ್ಸಿಂಗ್ ಕಾಲೇಜು ವತಿಯಿಂದ ಒಟ್ಟು 35,000 ಸೀಟುಗಳನ್ನು ಭರ್ತಿಮಾಡಿಕೊಳ್ಳಲಾಗುತ್ತದೆ. ಶೇ.20 ರಷ್ಟು ಸರ್ಕಾರಿ ಹಾಗೂ ಶೇ.80 ರಷ್ಟು ಆಡಳಿತ ಮಂಡಳಿಯವರು ತುಂಬಿಕೊಳ್ಳುತ್ತಾರೆ. ಶೇ.40 ರಷ್ಟು ಕೋಟಾವನ್ನು ಸರ್ಕಾರಕ್ಕೆ ಬಿಟ್ಡುಕೊಟ್ಟರೆ ಬಡ ವಿದ್ಯಾರ್ಥಿಗಳಿಗೆ ಉಪಕಾರವಾಗುತ್ತದೆ ಎಂದರು.ನರ್ಸಿಂಗ್ ಕಾಲೇಜುಗಳಲ್ಲಿ ಪ್ರವೇಶಾತಿಯನ್ನು ಸೆಪ್ಟೆಂಬರ್ ತಿಂಗಳಿನಿಂದ ಆಕ್ಟೋಬರ್ ವರೆಗೂ ನಡೆಸದೆ, ಇದೆ ಶೈಕ್ಷಣಿಕ ವರ್ಷದಿಂದ ಜುಲೈ ತಿಂಗಳಲ್ಲಿ ಪ್ರವೇಶ ಪ್ರಕ್ರಿಯೆ ನಡೆಸಲು ಅಗತ್ಯವಿರುವ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರದಾನ ಕಾರ್ಯದರ್ಶಿ ಮೊಹಮ್ಮದ್ ಮೊಸೀನ್, ರಾಜೀವ್ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿಶ್ವವಿದ್ಯಾಲಯದ ರಿಜಿಸ್ಟರ್ ಪಿ.ಆರ್ ಶಿವಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen + 3 =
Remember me
