ಬೆಂಗಳೂರು:ಉದ್ಯೋಗ ನಿರ್ವಹಣೆ ಸಂದರ್ಭದಲ್ಲಿ ಅಪಘಾತ ಸಂಭವಿಸಿ ಸಾವು-ನೋವು ಉಂಟಾದಲ್ಲಿ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಪ್ರಮಾಣಕ್ಕಿಂತ ಕಡಿಮೆ ವೇತನ ಇರುವುದಾಗಿ ಬಾಧಿತರು ಒಪ್ಪಿಕೊಂಡರೂ, ನ್ಯಾಯಾಲಯ ಮಾತ್ರ ಕನಿಷ್ಠ ವೇತನ ಪ್ರಮಾಣವನ್ನು ಪರಿಗಣಿಸಿಯೇ ಪರಿಹಾರ ನಿಗದಿಪಡಿಸಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಜೀಪ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿ ಎಡಗಣ್ಣಿನ ದೃಷ್ಟಿ ಕಳೆದುಕೊಂಡಿದ್ದ ಮೈಸೂರಿನ ಎಚ್.ಡಿ. ಕೋಟೆ ತಾಲೂಕಿನ ನಾಗೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರಿದ್ದ ಪೀಠ ಈ ಆದೇಶ ಮಾಡಿದೆ.
ಕಾರ್ವಿುಕರ ಕನಿಷ್ಠ ವೇತನವನ್ನು 4 ಸಾವಿರದಿಂದ 8 ಸಾವಿರ ರೂ.ಗೆ ಹೆಚ್ಚಿಸಿ 2010ರ ಮೇ 31ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕಾಲದಿಂದ ಕಾಲಕ್ಕೆ ದಿನಬಳಕೆ ವಸ್ತುಗಳ ಬೆಲೆ ಹಾಗೂ ಜೀವನ ನಿರ್ವಹಣಾ ವೆಚ್ಚ ಏರಿಕೆಯಾಗುತ್ತಿದೆ. ಇದರಿಂದ, ಸರ್ಕಾರವೂ ಕಾಲ ಕಾಲಕ್ಕೆ ಕಾನೂನಿಗೆ ತಿದ್ದುಪಡಿ ತಂದು ಕನಿಷ್ಠ ವೇತನ ಪ್ರಮಾಣ ಹೆಚ್ಚಿಸುತ್ತಿದೆ. ಇಂಥ ಸಂದರ್ಭದಲ್ಲಿ ಕಾನೂನು ಮತ್ತದರ ಜಾರಿಯ ಉದ್ದೇಶಕ್ಕೆ ಅನುಗುಣವಾಗಿ ನ್ಯಾಯಾಲಯಗಳು ನಡೆದುಕೊಳ್ಳಬೇಕಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಪರಿಹಾರ ಹೆಚ್ಚಳ:ಅರ್ಜಿದಾರ ನಾಗೇಂದ್ರ 2011ರಲ್ಲಿ ಜೀಪ್ ಚಲಾಯಿಸುವಾಗ ಅಪಘಾತಕ್ಕೆ ಗುರಿಯಾಗಿ ಎಡಗಣ್ಣಿನ ದೃಷ್ಟಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ಇದರಿಂದ, ಅವರು ಚಾಲನಾ ವೃತ್ತಿ ಮುಂದುವರಿಸಲು ಅಸಮರ್ಥರಾಗಿ ಉದ್ಯೋಗವನ್ನೇ ಕಳೆದುಕೊಂಡಿದ್ದಾರೆ. ಆದ್ದರಿಂದ, ಅವರು ಶೇ.100 ಆದಾಯ ಸಂಪಾದನೆ ಸಾಮರ್ಥ್ಯ ಕಳೆದುಕೊಡಿದ್ದಾರೆ ಎಂಬ ವಿಚಾರ ಪರಿಗಣಿಸಬೇಕಿದೆ. ಅಪಘಾತ ಸಂಭವಿಸಿದಾಗ ಅವರಿಗೆ 25 ವರ್ಷ. ಮಾಸಿಕ ವೇತನ 6 ಸಾವಿರ ರೂ. ಎಂದು ಸ್ವತಃ ನಾಗೇಂದ್ರ ಅವರೇ ತಿಳಿಸಿದ್ದಾರೆ. ಆದರೆ, 2010ರಲ್ಲಿ ಕೇಂದ್ರ ಸರ್ಕಾರ ಕನಿಷ್ಠ ವೇತನವನ್ನು 8 ಸಾವಿರ ರೂ. ನಿಗಿದಪಡಿಸಿದ್ದು, ಆದನ್ನು ಆಧರಿಸಿಯೇ ಪ್ರಕರಣದಲ್ಲಿ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿರುವ ಹೈಕೋರ್ಟ್, ಎಂಎಸಿಟಿ ನಿಗದಿಪಡಿಸಿದ್ದ ಪರಿಹಾರ ಮೊತ್ತವನ್ನು 7,88,423 ರೂ. ಗಳಿಂದ 10,41,168 ರೂ. ಗೆ ಹೆಚ್ಚಿಸಿ ಆದೇಶಿಸಿತು.
ಅಪ್ಪು ಹುಟ್ಟಿದಾಗ್ಲೇ ಸೂಪರ್ ಸ್ಟಾರ್, ನಾವೆಲ್ಲಾ ಆಮೇಲೆ ಸ್ಟಾರ್ ಆದೋರು; ಶಿವಣ್ಣ ಭಾವುಕ ನುಡಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 11 =
Remember me
