ಬೆಳಗಾವಿ:ಒಕ್ಕಲಿಗ ಸಮುದಾಯಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಬೇಕು ಎಂಬ ಬೇಡಿಕೆ ನ್ಯಾಯಯುತವಾಗಿದೆ. ನಾಡಿಗೆ ಅನ್ನ ಕೊಟ್ಟ ಸಮುದಾಯಕ್ಕೆ ಮೀಸಲಾತಿ ನೀಡಬೇಕು. ಕುಂಚಿಟಿಗ ಹಾಗೂ ಬಂಟರನ್ನು ಒಬಿಸಿಗೆ ಸೇರ್ಪಡೆ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್​ ಒತ್ತಾಯಿಸಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಸಚಿವರು, ಶೇ.4 ರಿಂದ 12ಕ್ಕೆ ಮೀಸಲಾತಿ ಏರಿಕೆ ಮಾಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಈಗಾಗಲೇ ಮನವಿ ಸಲ್ಲಿಸಿದ್ದೇವೆ. ನಗರ ಪ್ರದೇಶದ ಒಕ್ಕಲಿಗರಿಗೆ ಮೀಸಲಾತಿ ಇಲ್ಲ. ಅದನ್ನು ಆರ್ಥಿಕ ಹಿಂದುಳಿದ ವರ್ಗಗಳ ಮೀಸಲಾತಿ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕು.‌ ನ್ಯಾಯ ಒದಗಿಸಿಕೊಡುವುದಾಗಿ ಸಿಎಂ ಭರವಸೆ ಕೊಟ್ಟಿದ್ದಾರೆ.‌ ಅವರ ಮೇಲೆ ಅಚಲವಾದ ನಂಬಿಕೆ, ವಿಶ್ವಾಸ ಇದೆ ಎಂದರು.
ಶಾಸಕ ಮಸಾಲೆ ಜಯರಾಮ್ ಮಾತನಾಡಿ, ನಿರ್ಮಲಾನಂದನಾಥ ಶ್ರೀಗಳು ಎಲ್ಲರೂ ಒಗ್ಗಟ್ಟಿನಿಂದ ಹೋಗುವಂತೆ ಹೇಳಿದ್ದಾರೆ. ಸಚಿವರು, ಶಾಸಕರು ಹೋಗಿ ಭೇಟಿ ಮಾಡಿ ಮನವಿ ಮಾಡುತ್ತೇವೆ. ಜನವರಿ 4 ರಂದು ನಮ್ಮ ಸ್ವಾಮೀಜಿಗಳನ್ನ ಭೇಟಿ ಮಾಡುತ್ತೇವೆ ಎಂದರು.‌
ಇಂದು ಐಪಿಎಲ್​ ಮಿನಿ ಹರಾಜು: ಕಣದಲ್ಲಿದ್ದಾರೆ 405 ಆಟಗಾರರು, ಸ್ಟೋಕ್ಸ್​, ಕರನ್​, ಗ್ರೀನ್​ಗೆ ಭಾರಿ ಬೇಡಿಕೆ ನಿರೀಕ್ಷೆ

ಗದಗದಲ್ಲಿ ಶಿಕ್ಷಕನಿಂದಲೇ ಮಗನ ಕೊಲೆ: ಚಿಕಿತ್ಸೆ ಫಲಿಸದೆ ಅತಿಥಿ ಶಿಕ್ಷಕಿ ಗೀತಾ ಬಾರಕೇರ್ ಸಾವು

2,850 ಕೋಟಿ ರೂಪಾಯಿಗೆ ‘ಮೆಟ್ರೋ’ ಖರೀದಿಸಿದ ರಿಲಾಯನ್ಸ್​ ಇಂಡಸ್ಟ್ರೀಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
