ಬೆಂಗಳೂರು:ಬೇಡಿಕೆಗಳನ್ನು ಈಡೇರಿಸಲು ದೃಢ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಕಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಅಸಹಕಾರ ಚಳವಳಿ ಕೈಬಿಟ್ಟಿದ್ದಾರೆ.
ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ 14ರಿಂದ ಶಾಂತಿಯುತ ಅಸಹಕಾರ ಚಳವಳಿ ಹೂಡಲಾಗುವುದು. ಅಗತ್ಯ ಸೇವೆಗಳು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ನಿಲ್ಲಿಸಲಾಗುವುದು ಎಂದು ಕರ್ನಾಟಕ ಪಂಚಾಯತ್‌ರಾಜ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು.
ವಿಕಾಸಸೌಧದಲ್ಲಿ ಪ್ರಿಯಾಂಕ್ ಖರ್ಗೆಯವರು ಇಲಾಖೆ ಉನ್ನತಾಧಿಕಾರಿಗಳು ಹಾಗೂ ಪಿಡಿಒಗಳ ಸಂಘದ ಪದಾಧಿಕಾರಿಗಳ ಜತೆಗೆ ಚರ್ಚಿಸಿದರು. ಪಿಡಿಒಗಳ ಜೇಷ್ಠತಾ ಪಟ್ಟಿಯನ್ನು ಕಾನೂನು ಚೌಕಟ್ಟು ಮೀರದಂತೆ ವೈಜ್ಞಾನಿಕವಾಗಿ ಪರಿಶೀಲಿಸಿ ಶೀಘ್ರ ಪ್ರಕಟಿಸಲು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಪಿಡಿಒಗಳ ಜೇಷ್ಠತಾ ಪಟ್ಟಿ ಗೋಜಲಾಗಿದ್ದು, ಹಲವು ಜಿಲ್ಲೆಗಳ ಅಧಿಕಾರಿಗಳು ನ್ಯಾಯಾಲಯಗಳ ಮೊರೆ ಹೋಗಿರುವ ಕಾರಣ ಕಗ್ಗಂಟಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ಕ್ರಮಕೈಗೊಳ್ಳುವೆ ಎಂದು ಪಿಡಿಒಗ ಸಂಘದ ಪದಾಧಿಕಾರಿಗಳಿಗೆ ಭರವಸೆ ನೀಡಿದರು.
ಮುಂದಿನ ಸಾಮಾನ್ಯ ವರ್ಗಾವಣೆ ಸಮಯಕ್ಕೆ ಕೌನ್ಸೆಲಿಂಗ್ ಜಾರಿಗೊಳಿಸಿ ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುವೆ. ಪಿಡಿಒ ಹುದ್ದೆಗಳನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಪರಿಶೀಲಿಸಿ ಎಲ್ಲ ಅಧಿಕಾರಿಗಳಿಗೆ ಈ ಸೌಲಭ್ಯ ವಿಸ್ತರಿಸುವೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
ಸೇವಾ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ನೀಡಲು, ನಿಗದಿತವಾಗಿ ಸಭೆ ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸುವೆ. ಗ್ರಾಮೀಣ ಜನರ ಕಲ್ಯಾಣಕ್ಕೆ ಪಿಡಿಒಗಳು ಬದ್ಧತೆಯಿಂದ ಕೆಲಸ ಮಾಡಿದರೆ, ಅಧಿಕಾರಿಗಳ ಕಲ್ಯಾಣಕ್ಕೆ ಸರ್ಕಾರ ಹೆಚ್ಚು ಕಾಳಜಿ ತೋರಲಿದೆ ಎಂದು ಕಿವಿಮಾತು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 18 =
Remember me
