ಬೆಂಗಳೂರು: ಕೃಷಿ ಸಚಿವ ಬಿ.ಸಿ. ಪಾಟೀಲ್​, ಪತ್ನಿ ಹಾಗೂ ಅಳಿಯನಿಗೂ ಕರೊನಾ ಸೋಂಕು ದೃಢಪಟ್ಟಿದೆ.ಇದೀಗ ಬಂದ ವರದಿಯ ಪ್ರಕಾರ ನನಗೆ ಕರೊನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಬೆಂಗಳೂರಿನ ನನ್ನ ನಿವಾಸದಲ್ಲಿ ಹೋಂ ಕ್ವಾರಂಟೈನ್ ಆಗುತ್ತಿದ್ದೇನೆ. ಕೊಪ್ಪಳ ಜಿಲ್ಲೆಗೆ ಇತ್ತೀಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ನನ್ನ ಜತೆ ಆಗಮಿಸಿದ್ದ ಐದು ಸಿಬ್ಬಂದಿಗೂ ಕೂಡ ಸೋಂಕು ಖಚಿತವಾಗಿದೆ ಎಂದು ಬಿ.ಸಿ. ಪಾಟೀಲ್​ ಟ್ವಿಟರ್​ನಲ್ಲಿ ಮಾಹಿತಿ ನೀಡಿದ್ದಾರೆ.
ಅಲ್ಲದೇ, ಇತ್ತೀಚೆಗೆ ನನ್ನನ್ನು ಹಿರೇಕೆರೂರು ಹಾಗೂ ಕೊಪ್ಪಳ ಭಾಗದಲ್ಲಿ ಭೇಟಿಯಾದ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರು, ಯಾರಿಗಾದರೂ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಕೂಡಲೇ ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ;ರಾಜ್ಯದಲ್ಲಿ ನಿಗಾದಲ್ಲಿದ್ದಾರೆ 2 ಲಕ್ಷಕ್ಕೂ ಅಧಿಕ ಸಂಪರ್ಕಿತರು; ರಾಜಧಾನಿಯಲ್ಲಿ ಶೇ.50ಕ್ಕೂ ಹೆಚ್ಚು ಸೋಂಕಿತರು
ಯಾರೂ ಆತಂಕ ಪಡುವ ಅಗತ್ಯವಿಲ್ಲ, ಕೋವಿಡ್ ವಿರುದ್ಧ ಗೆಲ್ಲುವ ವಿಶ್ವಾಸವಿದೆ, ಜೊತೆಗೆ ನಿಮ್ಮೆಲ್ಲರ ಆಶೀರ್ವಾದ ಮತ್ತು ಹಾರೈಕೆ ಇರಲಿ ಕೋರಿದ್ದಾರೆ.ಇದಕ್ಕೂ ಮುನ್ನ, ಇನ್ನೊಂದು ಟ್ವೀಟ್​ ಮಾಡಿದ್ದ ಬಿ.ಸಿ. ಪಾಟೀಲ್​, ನನ್ನ ಶ್ರೀಮತಿ, ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗದವರು ಸೇರಿ ಒಟ್ಟು ಐವರಿಗೆ ಕರೊನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಅವರನ್ನು ನಿಗದಿತ ಕೋವಿಡ್ ಕೇರ್ ಸೆಂಟರ್​ಗೆ ಸೇರಿಸಲಾಗಿದೆ. ಅವರೆಲ್ಲ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ. ನಿಮ್ಮೆಲ್ಲರ ಹಾರೈಕೆಯೂ ಇರಲಿ ವಿನಂತಿಸಿದ್ದರು.
ಕರೊನಾ ಪಾಸಿಟಿವ್​ ಆದಾಗ ಆಸ್ಪತ್ರೆಗೆ ದಾಖಲಾಗಬೇಕೇ? ಬೇಡವೇ? ನೆರವಾಗಲಿದೆ ತಂತ್ರಜ್ಞಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
