ಬೆಂಗಳೂರು:ರಾಜ್ಯದಲ್ಲಿನ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ದಿಯ ನಿಟ್ಟಿನಲ್ಲಿ ಜಲಮೂಲಗಳ ಜಿಲ್ಲಾವಾರು ಅಟ್ಲಾಸ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದ್ದು, ಈ ನಿಟ್ಟಿನಲ್ಲಿ ಪ್ರಸ್ತಾವನೆ ರೂಪಿಸುವಂತೆ ಸಣ್ಣ ನೀರಾವರಿ ಸಚಿವ ಎನ್. ಎಸ್ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಅವರು ಪ್ರಾಧಿಕಾರದ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.
ರಾಜ್ಯದ ಜಲಮೂಲಗಳ ಸಂರಕ್ಷಣೆ ಹಾಗೂ ಅಭಿವೃದ್ದಿಯ ನಿಟ್ಟಿನಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಸೂಚನೆಗಳ ಅನ್ವಯ ಪ್ರಾಧಿಕಾರವನ್ನು ರಚಿಸಿ, ಈ ಪ್ರಾಧಿಕಾರಕ್ಕೆ ಮಹತ್ವದ ಜವಾಬ್ದಾರಿ ವಹಿಸಲಾಗಿದೆ. ಆದರೆ ಪ್ರಾಧಿಕಾರ ತನಗೆ ಪ್ರದತ್ತವಾದ ಅಧಿಕಾರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಹಿಂದುಳಿದೆ. ಪ್ರಾಧಿಕಾರದ ಮೂಲ ಉದ್ದೇಶಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲವಾದದ್ದು ಏಕೆ ಎಂದು ಅಧಿಕಾರಿಗಳನ್ನು ತರಾಟೆ ತಗೆದುಕೊಂಡರು.
ಪ್ರಾಧಿಕಾರದ ವ್ಯಾಪ್ತಿಯಲ್ಲಿ 34,487 ಕೆರೆಗಳಿವೆ. ಈ ಕರೆಗಳ ಸಂರಕ್ಷಣೆ ಮತ್ತು ಅಭಿವೃದ್ದಿಯನ್ನು ಸಂಬಂಧಪಟ್ಟ ಉಸ್ತುವಾರಿ ಇಲಾಖೆಗಳ ಮೂಲಕ ಕೈಗೊಳ್ಳಲಾಗುತ್ತಿದೆ. ಜಲಮೂಲಗಳ ಸಂರಕ್ಷಣೆ ಹಾಗೂ ಅಭಿವೃದ್ದಿಗಾಗಿ ನಿರ್ಮಿಸಿರುವ ಪ್ರತ್ಯೇಕ ಪ್ರಾಧಿಕಾರ ಹೊಸ ಯೋಜನೆಗಳ ಅನುಷ್ಠಾನಕ್ಕೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು ಎಂದು ಸೂಚನೆ ನೀಡಿದರು.
ರಾಜ್ಯದಲ್ಲಿರುವ ಜಲಮೂಲ ಗುರುತಿಸಲು ಪ್ರಾಧಿಕಾರದಿಂದ ಹಲವಾರು ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ಎಲ್ಲ ಜಲಮೂಲ ಕ್ರೋಢೀಕರಿಸಿ ಅಟ್ಲಾಸ್ ರಚನೆ ಮಾಡುವುದರಿಂದ ಜಲಮೂಲಗಳ ಸಂರಕ್ಷಣೆಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಪ್ರಸ್ತಾವನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯತೀಶ್ ಚಂದ್ರ, ನಿರ್ದೇಶಕ ಶಿವಸ್ವಾಮಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − twelve =
Remember me
