ಬೆಂಗಳೂರು:ರಾಜ್ಯ ಸರ್ಕಾರದ ಆಡಳಿತದ ವಿರುದ್ಧ ಆರೋಪ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ನಾಯಕ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್​ ಗುಂಡೂರಾವ್, ಸರಣಿ​ ಟ್ವೀಟ್​ ಮುಖೇನ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ಕಾರಿನೊಳಗೆ ಪತ್ತೆಯಾಯ್ತು ವ್ಯಕ್ತಿಯ ಮೃತದೇಹ: ಸಾವಿಗೆ ಕಾರಣ ಮಾತ್ರ ನಿಗೂಢ
“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಎಚ್​ಡಿಕೆ ಅವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಕುಮಾರಸ್ವಾಮಿ, ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ?” ಎಂದು ಟ್ವೀಟ್​ ಮಾಡಿದ್ದಾರೆ.
1ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ HDKಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌.ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ HDK ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ.
ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao)August 6, 2023

“ಎಚ್​ಡಿಕೆ ಅವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ, ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ. ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವವರು ಯಾರು?” ಎಂದು ಟ್ವೀಟ್​ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ:508 ರೈಲು ನಿಲ್ದಾಣಗಳ ಪುನಾರಾಭಿವೃದ್ಧಿ: ಭಾರತೀಯ ರೈಲ್ವೆ ಇತಿಹಾಸದ ಹೊಸ ಅಧ್ಯಾಯ ಆರಂಭ ಎಂದ ಪ್ರಧಾನಿ
“ಎಚ್​​ಡಿಕೆ ಚುನಾವಣೆಗೂ ಮುನ್ನ ‘ಕಿಂಗ್ ಮೇಕರ್’ ಆಗುವ ಕನಸು ಕಂಡಿದ್ದರು. ಆದರೆ ಜನರು ಚುನಾವಣೆಯಲ್ಲಿ ಅವರ ‘ಕಿಂಗ್ ಮೇಕರ್’ ಕನಸನ್ನು ನುಚ್ಚುನೂರು ಮಾಡಿದರು. ಕುಮಾರಸ್ವಾಮಿ ಕನಸು ಭಗ್ನಗೊಂಡ, ಭಗ್ನಪ್ರೇಮಿಯಂತೆ ವ್ಯಗ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ” ಎಂದು ಸರಣಿ ಟ್ವೀಟ್ ಮಾಡುವ​ ಮುಖೇನ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
3HDKಯವರು ಚುನಾವಣೆಗೂ ಮುನ್ನ 'ಕಿಂಗ್ ಮೇಕರ್' ಆಗುವ ಕನಸು ಕಂಡಿದ್ದರು.
ಆದರೆ ಜನರು ಚುನಾವಣೆಯಲ್ಲಿ HDK 'ಕಿಂಗ್ ಮೇಕರ್' ಕನಸನ್ನು ನುಚ್ಚುನೂರು ಮಾಡಿದರು.
ಕನಸು ಭಗ್ನಗೊಂಡ HDK, ಭಗ್ನಪ್ರೇಮಿಯಂತೆ ವ್ಯಗ್ರರಾಗಿದ್ದಾರೆ.
ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao)August 6, 2023

ದಳಪತಿ ವಿಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ಈ ದಿನ ರಿಲೀಸ್ ಆಗಲಿದೆ ‘ಲಿಯೋ’ ಟೀಸರ್​?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + seventeen =
Remember me
