ಬೆಂಗಳೂರು:ಗೃಹಲಕ್ಷ್ಮೀ ಯೋಜನೆಯನ್ನು ಜಾರಿ ಮಾಡದಂತೆ ನಾನೇ ತಡೆಹಿಡಿದಿದ್ದೇನೆ. ಕೆಲವೊಂದು ಬದಲಾವಣೆ ಆಗಬೇಕಿದೆ. ಆ ಬಳಿಕವಷ್ಟೇ ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ಹೇಳಿದರು.
ಗೃಹಲಕ್ಷ್ಮೀ ಯೋಜನೆ ವಿಳಂಬ ವಿಚಾರವಾಗಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ನಾನೇ ಗೃಹಲಕ್ಷ್ಮೀ ಯೋಜನೆಯನ್ನು ತಡೆಹಿಡಿದಿದ್ದೇನೆ. ಗಲಾಟೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಿದ್ದೇನೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ಜೊತೆ ಇವತ್ತು ಒಂದು ಸಭೆ ಮಾಡುತ್ತೇವೆ. ಸರಳವಾಗಿ ಯೋಜನೆಯನ್ನು ಅನುಷ್ಠಾನ ಮಾಡುತ್ತೇವೆ ಎಂದರು.
ಇದನ್ನೂ ಓದಿ:ನೀವು ಮನೆಗೆ ಮಾರಿ, ಪರರಿಗೆ ಉಪಕಾರಿ: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಸಚಿವ ದಿನೇಶ್​ ಗುಂಡೂರಾವ್ ವಾಗ್ದಾಳಿ
ನಿಮ್ಮ ಮೊಬೈಲ್​ಗಳಲ್ಲೇ ಎಲ್ಲರು ಅರ್ಜಿ ಹಾಕಬೇಕು. ಆ ರೀತಿಯಲ್ಲಿ ಯೋಜನೆ ಜಾರಿಗೆ ತರುತ್ತೇವೆ. ಭ್ರಷ್ಟಾಚಾರಕ್ಕೆ ಆಸ್ಪದ ನೀಡದಂತೆ ಯೋಜನೆ ಜಾರಿ ಮಾಡುತ್ತೇವೆ. ಅರ್ಜಿಯನ್ನು ಉಚಿತವಾಗಿ ಮಾಡಿ ಕೊಡಬೇಕು. ಯಾರಾದರೂ ಸಂಘ-ಸಂಸ್ಥೆಗಳು ಹಣ ವಸೂಲಿ ಮಾಡಿದರೆ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ. ಈಗಾಗಲೇ 200 ರಿಂದ 500 ರೂಪಾಯಿ ಹಣ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಇದೆ. ಅವರ ಬಗ್ಗೆ ಗೊತ್ತಾರೆ ಏಜೆನ್ಸಿಯನ್ನು ರದ್ದು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಈ ಯೋಜನೆಗಳ ಅಡಿಯಲ್ಲಿ ಯಾರು ಕೂಡ ಇನ್ನೊಬ್ಬರಿಗೆ ಲಂಚ ಕೊಡಬಾರದು. ಲಂಚ ಕೊಟ್ಟರೆ ನಾವು ಒಂದು ಹೆಲ್ಪ್​ಲೈನ್ ನಂಬರ್ ಕೊಡುತ್ತೇವೆ. ಅದಕ್ಕೆ ಕರೆ ಮಾಡಿ ಮಾಡಿ ದೂರು ಕೊಡಲಿ ಎಂದು ತಿಳಿಸಿದರು.
ಗ್ಯಾರಂಟಿ ಗೊಂದಲಗಳ ಬಗ್ಗೆ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಕೆಶಿ, ಯಡಿಯೂರಪ್ಪನವರಿಗೆ ಪ್ರಜಾಪ್ರಭುತ್ವದಲ್ಲಿ ಹೋರಾಟಕ್ಕೆ ಅವಕಾಶ ಇದೆ. ನಾವು ಪ್ರತಿಭಟನೆ ಮಾಡಿದಾಗ ನಮ್ಮ ಮೇಲೆ ಕೇಸ್ ಹಾಕಿರೋದನ್ನು‌ ನೆನೆಸಿಕೊಳ್ಳಲಿ. ನೀವು ಪಕ್ಷದ ಅಧ್ಯಕ್ಷರಾಗಿದ್ದಾಗ ಜಾರಿ ಮಾಡಿದ ನಿಮ್ಮ ಪ್ರಣಾಳಿಕೆಯನ್ನು ತೆಗೆದು ನೋಡಿ. ನಾವು ಪ್ರತಿ ಆದಾಯವನ್ನು ದ್ವಿಗುಣ ಮಾಡುತ್ತೇವೆ, 2 ಕೋಟಿ ಉದ್ಯೋಗ ಕೊಡುತ್ತೇವೆ. ಕಪ್ಪು ಹಣ ತಂದು 15 ಲಕ್ಷ ರೂ. ಖಾತೆಗೆ ಹಾಕುತ್ತೇವೆ ಅಂದಿದ್ರಿ. ಕೇಂದ್ರ ಸರ್ಕಾರ ತಮ್ಮ ಪ್ರಣಾಳಿಕೆಯನ್ನು ಅನುಷ್ಠಾನಕ್ಕೆ ತಂದಿದೆಯಾ ನೋಡಿ. ಯಡಿಯೂರಪ್ಪನವರೇ ನೀವು ಬಸವಣ್ಣನವರ ನಾಡಿನವರು. ನಿಮ್ಮ ಧರಣಿಗೆ ನಾನು ಬರುತ್ತೇನೆ. ನಿಮಗೆ ಹಾರೈಸುತ್ತೇವೆ. ನೀವು ನಮಗೆ ಮಾರ್ಗದರ್ಶನ ಮಾಡಿ. ಇನ್ನು ಒಂದು ವರ್ಷದಲ್ಲಿ ಪಾರ್ಲಿಮೆಂಟ್ ಚುನಾವಣೆ ಬರುತ್ತಿದೆ. ಇನ್ನೂ ನಮ್ಮ ಶಕ್ತಿ ಇದೆ ಎಂದು ತೋರಿಸಿಕೊಳ್ಳಲು ಮಾತಾಡ್ತಿದ್ದಾರೆ. ಶೋಭಕ್ಕಾ ಸೇರಿದಂತೆ ಎಲ್ಲರೂ ಮಾತಾಡ್ತಿದ್ದಾರೆ. ಅವರಿಗೆ ಕಾಲವೇ ಉತ್ತರ ಕೊಡುತ್ತದೆ ಎಂದರು.(ದಿಗ್ವಿಜಯ ನ್ಯೂಸ್​)
ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗ ಸಾವು ಪ್ರಕರಣ: 1100 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ, 11 ಮಂದಿ ವಿರುದ್ಧ ಆರೋಪ

ಸಾರ್ವಜನಿಕರ ಜೇಬಿಗೆ ಕತ್ತರಿ : ಬೆಲೆ ಏರಿಸಲು ಮುಂದಾದ ಹೊಟೇಲ್​ಗಳು​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
