ಬೆಂಗಳೂರು:ಬಿಜೆಪಿಯ ಪ್ರಣಾಳಿಕೆ ರಾಮರಾಜ್ಯದ ಪರಿಕಲ್ಪನೆಯಲ್ಲಿ ಇರಲಿದ್ದು, ರಾಜ್ಯದ ಆರ್ಥಿಕ ಸ್ಥಿತಿ ಮತ್ತು ಶಕ್ತಿಯನ್ನು ಆಧರಿಸಿ ಅಭಿವೃದ್ಧಿಗೆ ಪೂರಕವಾಗಿರಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಪ್ರಣಾಳಿಕೆ ಅಭಿಯಾನ ಸಲಹಾ ಸಮಿತಿ ಸಭೆಯ ಬಳಿಕ ಮಾತನಾಡಿದ ಅವರು, ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ಸಲಹಾ ಪೆಟ್ಟಿಗೆಗಳನ್ನು ಇಡಲಾಗಿತ್ತು. ಅದೆಲ್ಲವನ್ನೂ ತರಿಸಿಕೊಂಡು ತಾಲೂಕುವಾರು, ಜಿಲ್ಲಾವಾರು ಸಲಹೆಗಳನ್ನು ತೆಗೆದುಕೊಂಡು ಡಿಜಿಟಲೈಸ್‌ ಮಾಡಲಾಗಿದೆ. ಪ್ರತಿಯೊಂದು ವರ್ಗದ ಜನರ ಅಭಿವೃದ್ಧಿಗೆ ಏನು ಮಾಡಬಹುದು ಅನ್ನುವುದನ್ನು ಚರ್ಚಿಸಿ ಪ್ರಣಾಳಿಕೆ ಸಿದ್ಧವಾಗಲಿದೆ ಎಂದರು.
ಇದನ್ನೂ ಓದಿ:ತ್ರಿಶೂಲ ಹಿಡಿದು ರಸ್ತೆಗಿಳಿದಿಲ್ಲವೆಂದರೆ ಮುಂದೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತೆ: BJP ಮುಖಂಡ
ಪ್ರಣಾಳಿಕೆ ಸಮಿತಿಯಲ್ಲಿ ವಿಷಯವಾರು ತಜ್ಞರು ಸೇರಿದಂತೆ 32 ಎಕ್ಸ್‌ಪರ್ಟ್‌ಗಳಿದ್ದಾರೆ. ಇವರ ಜೊತೆ ಸಮಾಲೋಚನೆ ನಡೆಸಿ, ಕರ್ನಾಟಕದ ಪ್ರಣಾಳಿಕೆ ಇಡೀ ದೇಶಕ್ಕೆ ಮಾದರಿಯಾಗಿ, ಸಮಗ್ರವಾಗಿರಲಿದೆ. ಹೊಸತನ ಮತ್ತು ಬದುಕು ಕಟ್ಟಿಕೊಡುವ, ನೈಜತೆಯಿಂದ ಕೂಡಿರುವ ಪ್ರಣಾಳಿಕೆ ಇದಾಗಿರಲಿದೆ ಎಂದು ತಿಳಿಸಿದರು.
ಇದನ್ನೂ ಓದಿ:ನೆರೆ ಮನೆಯ 1,100 ಕೋಳಿಗಳನ್ನು ಹೆದರಿಸಿ ಸಾಯಿಸಿದ ವ್ಯಕ್ತಿಗೆ 6 ತಿಂಗಳು ಜೈಲು ಶಿಕ್ಷೆ!ಬಿಜೆಪಿಯ ಪ್ರಣಾಳಿಕೆ ಕೇವಲ ಘೋಷಣೆಗೆ ಸೀಮಿತವಾಗದೆ 5 ವರ್ಷಗಳಲ್ಲಿ ನಮ್ಮ ಸರ್ಕಾರ ಮಾಡಬೇಕಾಗಿರುವ, ಮಾಡಬಹುದಾದ ಅಭಿವೃದ್ಧಿಯ ಬ್ಲೂ ಪ್ರಿಂಟ್‌ ಆಗಲಿರಲಿದೆ. ಮುಂದಿನ 7 ದಿನಗಳ ಒಳಗೆ ಪ್ರಣಾಳಿಕೆ ಬಿಡುಗಡೆಯಾಗಲಿದ್ದು, ಗ್ರೇಟರ್‌ ಬೆಂಗಳೂರು, ಕರಾವಳಿ ಪ್ರದೇಶ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೆ ಮೈಸೂರು ಹೀಗೆ ವಲಯವಾರು, ಜಿಲ್ಲಾವಾರು ಪ್ರಣಾಳಿಕೆ ಮಾಡಲು ಅವಕಾಶವಿದೆ ಎಂದರು.
ನಾನು ಮೊದಲು ಮನುಷ್ಯಳು ನಂತರ ತಾಯಿ, ಸೆಲೆಬ್ರಿಟಿ; ನಟಿ ಪ್ರೀತಿ ಜಿಂಟಾ ಹೀಗೆ ಹೇಳಿದ್ಯಾಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + twenty =
Remember me
