ಕೋಲಾರ: ಎತ್ತಿನಹೊಳೆ ಯೋಜನೆ ಕಾಮಗಾರಿ ಶೀಘ್ರ ಮುಗಿಸಲು ಅವಿಭಜಿತ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಶಾಸಕರು ಒಟ್ಟಾಗಿ ಸಿಎಂ ಮೇಲೆ ಒತ್ತಡ ತರುವ ಜತೆಗೆ ಸಾಲ ಮಾಡಿ ಇಲ್ಲವೇ ನೀರಾವರಿ ಬಾಂಡ್ ಮಾರಿಯಾದರೂ ಯೋಜನೆಯನ್ನು ಮೂರು ವರ್ಷದೊಳಗೆ ಮುಗಿಸುತ್ತೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎತ್ತಿನಹೊಳೆ ಯೋಜನೆಗೆ ಕಾರ್ಯಾದೇಶ ನೀಡಿದ್ದು ಅಂದಿನ ಸಿಎಂ ಡಿ.ವಿ.ಸದಾನಂದಗೌಡ. ಯೋಜನೆ ಅವರ ಕನಸಿನ ಕೂಸು ಎಂದರು. ಎತ್ತಿನಹೊಳೆ ಯೋಜನೆ ಅನುಷ್ಠಾನಗೊಂಡಲ್ಲಿ ಕೋಲಾರ,ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ರೈತರ ಬದುಕು ಹಸನಾಗಲಿದೆ ಎಂದ ಅವರು, ಜಿಲ್ಲೆಯ ಕೆಲವು ರಾಜಕಾರಣಿಗಳು ಬಾಯಿ ಚಪಲಕ್ಕೆ ಎತ್ತಿನಹೊಳೆ ಯೋಜನೆಯ ಕ್ರೆಡಿಟ್ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಕೋವಿಡ್ ತಡೆ ಕ್ರಮ
ಪ್ರಧಾನಿ ನರೇಂದ್ರ ಮೋದಿ, ಸಿಎಂ.ಯಡಿಯೂರಪ್ಪ ನೇತೃತ್ವದಲ್ಲಿ ಕೋವಿಡ್ ನಿಯಂತ್ರಣದಲ್ಲಿ ಯಶಸ್ವಿಯಾಗಿದ್ದೇವೆ. ಅತಿ ಹೆಚ್ಚು ಜನಸಂಖ್ಯೆ ಇರುವ ದೇಶ ಭಾರತ. ಆದರೂ ಇತರೆ ರಾಷ್ಟ್ರಗಳಿಗೆ ಹೋಲಿಸಿದರೆ ಇಲ್ಲಿ ಸೋಂಕು ಕಡಿಮೆ. ರಾಜ್ಯದಲ್ಲಿ ಸಾವಿನ ಪ್ರಮಾಣವೂ ಶೇ.1ಕ್ಕೆ ಇಳಿಯುತ್ತಿದೆ. ಲಸಿಕೆ ಸಂಶೋಧನೆ, ಪ್ರಯೋಗ ನಡೆಯುತ್ತಿದ್ದು, ಎಲ್ಲ ಪ್ರಯೋಗ ಯಶಸ್ವಿಯಾದ ನಂತರವಷ್ಟೇ ಲಸಿಕೆ ಮಾರುಕಟ್ಟೆಗೆ ಬರಲಿದೆ ಎಂದರು.
ಬೋಗಸ್ ಮತದಾರರು
ಕೋಲಾರ ಭಾಗದಲ್ಲಿ ಪದವಿ ಮಾಡದಿದ್ದರೂ ಕೆಲವರು ಉದ್ದೇಶ ಪೂರ್ವಕವಾಗಿ ಅಂತಹವರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಿರುವ ಬಗ್ಗೆ ಡಿಸಿಗೆ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ಲಿಖಿತ ದೂರು ನೀಡಿದ್ದಾರೆ. ಮತದಾನದಂದು ಬೋಗಸ್ ಮತದಾರರು ಕಾಣಿಸಿದರೆ ಹಿಡಿದು ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಅಂತಹವರಿಗೆ ಶಿಕ್ಷೆಯಾಗುತ್ತದೆ. ಅನರ್ಹ ಮತದಾರರು ಇದನ್ನು ಗಂಭೀರವಾಗಿ ತೆಗೆದುಕೊಳ್ಳಿ ಎಂದು ಹೇಳಿದರು.



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 13 =
Remember me
