ಹಾಸನ:ಹಾಸನ-ಸಕಲೇಶಪುರ-ಶಿರಾಡಿ ನಡುವಿನ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮತ್ತು ದುರಸ್ತಿ ಕಾಮಗಾರಿ ಕೆಲವು ಕಡೆ ಕಳಪೆಯಾಗಿರುವುದನ್ನು ಖುದ್ದು ಲೋಕೋಪಯೋಗಿ ಸಚಿವರೇ ಪತ್ತೆ ಹಚ್ಚಿದ್ದಾರೆ. ಮಾತ್ರವಲ್ಲದೆ ಈ ಬಗ್ಗೆ ಸ್ಥಳದಲ್ಲಿ ಹಾಜರಿದ್ದ ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಲ್ಲದೆ, ನ್ಯೂನತೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿದರು.
ನೆಲಮಂಗಲ ಕ್ರಾಸ್​ನಿಂದ ಕುಕ್ಕೆ ಸುಬ್ರಹ್ಮಣ್ಯದವರೆಗೆ ಮಳೆ ಅನಾಹುತದಿಂದ ಉಂಟಾಗಿರುವ ಹೆದ್ದಾರಿ ಹಾನಿಯನ್ನು ಇಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಪರಿಶೀಲಿಸಿದರು. ಬಳಿಕ ಮಾತನಾಡುತ್ತಿದ್ದ ಅವರು, ಹಾಸನ ಸಕಲೇಶಪುರ ಭಾಗದ ಹೆದ್ದಾರಿ ವಿಸ್ತರಣೆ ಕಾಮಗಾರಿಯು ನಾನಾ ಕಾರಣದಿಂದ ವಿಳಂಬವಾಗಿತ್ತು. ಅಷ್ಟೇ ಅಲ್ಲ ಬಾಳ್ಳುಪೇಟೆ ಮತ್ತಿತರ ಕಡೆಗಳಲ್ಲಿ ಹೆದ್ದಾರಿ ಕಾಮಗಾರಿ ಲೋಪದೋಷದಿಂದ ಕೂಡಿರುವುದು ಇಲ್ಲವೇ ಕಳಪೆಯಾಗಿರುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ಸಮರ್ಪಕವಾಗಿ ಸರಿಪಡಿಸಲು ಸ್ಥಳದಲ್ಲಿಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರು- ಹಾಸನ- ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕೆಲಸ ಸರಿಯಾಗಿ ನಡೆಯುವಂತಾಗಲು ಗುಣಮಟ್ಟ ನಿಯಂತ್ರಣಾಧಿಕಾರಿಯೊಬ್ಬರನ್ನು ನೇಮಿಸಲಾಗುವುದು ಎಂದು ಸಚಿವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಕಿಚ್ಚ ಸುದೀಪ್​ಗೆ ಅವಹೇಳನ; ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಪೊಲೀಸರಿಗೆ ದೂರು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
