ಚಾಮರಾಜನಗರ:ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲಿದ್ದಾರೆ ಎಂಬ ವಿಚಾರಕ್ಕೆ ಇಂದು ಚಾಮರಾಜನಗರದಲ್ಲಿ ಪ್ರತಿಕ್ರಿಯಿಸಿದ ಸಚಿವ ಎಚ್.ಸಿ. ಮಹದೇವಪ್ಪ, ಜನರು 136 ಸೀಟು ಗೆಲ್ಲಿಸಿರೋದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜೀನಾಮೆ ಕೇಳಿದ ತಕ್ಷಣ ಕೊಡೋದಿಕ್ಕಾ ಎಂದು ಗರಂ ಆಗಿ ಹೇಳಿದ್ದಾರೆ.
ಇದನ್ನೂ ಓದಿ:ಶ್ರೀ ಸಾಯಿ ಮಂದಿರದ ಪ್ರಥಮ ವಾರ್ಷಿಕೋತ್ಸವ; ದತ್ತಾತ್ರೇಯ ಹೋಮ, ರುದ್ರ ಹೋಮ, ಭಕ್ತರಿಂದ ಕ್ಷೀರಾಭಿಷೇಕ ಆಯೋಜನೆ
“ಅಸಲಿಗೆ ಅವರೆಲ್ಲಾ ಏನೇನು ಮಾಡಿದ್ದಾರೆ ಗೊತ್ತಾ ವಿಜಯೇಂದ್ರ, ಯಡಿಯೂರಪ್ಪ, ಅಶೋಕ, ಎಚ್​.ಡಿ. ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಇವರ ಮೇಲೆ ಸಾಕಷ್ಟು ಕೇಸ್​ಗಳಿವೆ. ಮೊದಲು ಅವರ ಮನೆ ಶುದ್ದಿ ಮಾಡಿಕೊಳ್ಳಲಿ. ಶಾಸಕರು, ಮಂತ್ರಿಗಳು, ಹೈ ಮಾಂಡ್ ಎಲ್ಲರು ಸಿಎಂ ಪರವಿದ್ದಾರೆ. ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ” ಎಂದರು.
ಇನ್ನು ಮುಡಾ ಹಗರಣ, ವೈಟ್ನರ್ ಬಳಸಿ ತಿದ್ದಿರುವ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ಇದು ನಿರಾಧಾರ ವಿಷಯ. ಸಿಎಂ ಪಾತ್ರ ಇಲ್ಲದಿದ್ದರೂ ವಿಪಕ್ಷದವರು ರಾಜಕೀಯಕರಣಗೊಳಿಸುತ್ತಿದ್ದಾರೆ. ರಾಜ್ಯದಲ್ಲಿ ಅತಿವೃಷ್ಟಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಅತ್ತ ಗಮನಹರಿಸದೆ ಇತ್ತ ಕಾಲ ಕಳೆಯುತ್ತಿದ್ದಾರೆ. ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶಯಾಗಿದೆ. ನ್ಯಾಯಾಲಯದ ಮುಂದೆಯೂ ಕೂಡ ಪ್ರಕರಣವಿದೆ. ಆದರೂ ಅಂತೆ ಕಂತೆಗಳ ಸೃಷ್ಟಿ ಮಾಡಿದ್ದಾರೆ” ಎಂದು ಹೇಳಿದರು.
ಇದನ್ನೂ ಓದಿ:ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರ ವಿರುದ್ಧ ಕ್ರಮ
“ಪ್ರಾಮಾಣಿಕತೆ, ಬದ್ದತೆ ಇರುವ ಒಬ್ಬ ಹಿಂದುಳಿದ ವರ್ಗದ ನಾಯಕನ ವ್ಯಕ್ತಿತ್ವ, ಗೌರವಕ್ಕೆ ಧಕ್ಕೆ ತರುವ ಪ್ರಯತ್ನವಿದು. ಸಿಎಂ ಸಾರ್ವಜನಿಕ ಜೀವನಕ್ಕೆ ಕಪ್ಪುಚುಕ್ಕೆ ತರುವ ಪ್ರಯತ್ನ. ಕೋಮುವಾದಿಗಳಿಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಆಗಬಾರದು ಎಂಬುದು ಅವರ ಬಯಕೆ. ಜೆಡಿಎಸ್, ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಎಲ್ಲಾ ಸೇರಿ ರಾಜಕೀಯ ಪಿತೂರಿ ಮಾಡ್ತಿದ್ದಾರೆ” ಎಂದು ಹೇಳಿದರು.
ಇದು ನೀವೇನಾ? ಟೀಕೆಗಳ ಬೆನ್ನಲ್ಲೇ ಫೋಟೋ ಡಿಲೀಟ್​! ಗುರುತು ಸಿಗದಷ್ಟು ಬದಲಾಗಿದ್ದಾರೆ ಈ ಸ್ಟಾರ್​ ಬ್ಯೂಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − one =
Remember me
